×
Ad

ರಾಹುಲ್ ಗಾಂಧಿ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕ ಪ್ರತಿಭಟನೆ

Update: 2016-11-04 22:27 IST

ಕುಶಾಲನಗರ, ನ.4: ರಾಹುಲ್ ಗಾಂಧಿ ಬಂಧನವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್, ಸಮಾನ ವೇತನ ಸಮಾನ ಪಿಂಚಣಿ ಯೋಜನೆ ಜಾರಿಗೊಳಿಸುವಲ್ಲಿ ಆಗಿರುವ ವಿಳಂಬ ಹಿನ್ನೆಲೆಯಲ್ಲಿ ಮನನೊಂದು ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ತೆರಳಿದ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಂಧಿಸಿರುವ ಕ್ರಮ ಖಂಡನೀಯ. ಕುಟುಂಬ ಸದಸ್ಯರಿಗೆ ಕನಿಷ್ಠ ಸಾಂತ್ವನ ಹೇಳಲು ತೆರಳದ ಪ್ರಧಾನಿ ಯೋಧರೊಂದಿಗೆ ದೀಪಾವಳಿ ಆಚರಿಸಿ ನಕಲಿ ದೇಶಪ್ರೇಮ ತೋರ್ಪಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಇದೇ ಸಂದರ್ಭ ಮಾನವ ಸರಪಳಿ ರಚಿಸುವ ಮೂಲಕ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯಲ್ಲಿ ನಗರ ಘಟಕದ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಟ್ಟಣ ಪಂಚಾಯತ್ ಸದಸ್ಯರಾದ ಪ್ರಮೋದ್ ಮುತ್ತಪ್ಪ, ಎಚ್.ಜೆ. ಕರಿಯಪ್ಪ, ಎಚ್.ಕೆ. ಪಾರ್ವತಿ, ಶಿವಶಂಕರ್, ಫಜಲುಲ್ಲಾ, ಪ್ರಮುಖರಾದ ಎಸ್.ಎನ್. ನರಸಿಂಹಮೂರ್ತಿ, ಅಬ್ದುಲ್ ಖಾದರ್, ಚಂದನ್ ಮತ್ತಿತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News