ಎನ್‌ಡಿಟಿವಿ ಪ್ರಸಾರ ನಿಷೇಧ ಖಂಡಿಸಿ ಪ್ರತಿಭಟನೆ
Update: 2016-11-05 13:09 IST
ಕೋಲಾರ, ನ.5: ಎನ್‌ಡಿಟಿವಿ ಪ್ರಸಾರಕ್ಕೆ ನಿಷೇಧ ಹೇರಿರುವ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಖಂಡಿಸಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ವಾರ್ತಾ ಇಲಾಖೆ ಬಳಿಯಿಂದ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದ ಪತ್ರಕರ್ತರು ಕೇಂದ್ರ ಸರಕಾರ ಹೇರಿರುವ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವವನ್ನು ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ವಹಿಸಿದ್ದರು.