×
Ad

ಮಹಾರಾಷ್ಟ್ರದ ಗಡಿಯಲ್ಲಿ ಶಿವಸೇನೆಯ ಪುಂಡಾಟಿಕೆ

Update: 2016-11-05 13:42 IST

ಬೆಳಗಾವಿ, ನ.5:ಮಹಾರಾಷ್ಟ್ರದ ಗಡಿಭಾಗದಲ್ಲಿ ಶಿವಸೇನೆಯ ಕಾರ್ಯಕರ್ತರು ಕರ್ನಾಟಕದ ನೋಂದಣಿ ಹೊಂದಿರುವ ವಾಹನಗಳ ಬೋರ್ಡ್‌ಗಳನ್ನು ಕಿತ್ತೆಸೆದು ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದಾರೆ.
 ಕನ್ನಡದಲ್ಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳನ್ನು ಮಹಾರಾಷ್ಟ್ರ ಪ್ರವೇಶಿಸದಂತೆ ಶಿವಸೇನೆಯ ಕಾರ್ಯಕರ್ತರು ತಡೆಯೊಡ್ಡುತ್ತಿದ್ದಾರೆ. ಗಡಿ ಪ್ರದೇಶವಾಗಿರುವ ಕೋಗನಹಳ್ಳಿಯಲ್ಲಿ ಶಿವಸೇನೆಯ ಕಾರ್ಯಕರ್ತರ ಪುಂಡಾಟಿಕೆಯಿಂದಾಗಿ ಕರ್ನಾಟಕದ ವಾಹನಗಳು ಸಾಲುಗಟ್ಟಿ ನಿಂತಿದೆ.
ನವೆಂಬರ್ 1ರಂದು ಎಂಇಎಸ್ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಕರಾಳ ದಿನಾಚರಣೆ ಮಾಡಿದ್ದರು. ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯ ಬೆನ್ನಲ್ಲೇ ಶಿವಸೇನೆ ಕನ್ನಡಿಗರ ಮೇಲೆ ದೌರ್ಜನ್ಯಕ್ಕಿಳಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News