ನ.13: ಜಮಾಅತೆ ಇಸ್ಲಾಮೀ ಹಿಂದ್‌ನ ದ.ಕ.ಜಿಲ್ಲಾ ಏಕದಿನ ಸಮಾವೇಶ
Update: 2016-11-05 22:06 IST
ಉಪ್ಪಿನಂಗಡಿ, ನ.5: ಜಮಾಅತೆ ಇಸ್ಲಾಮೀ ಹಿಂದ್ ಇದರ ದಕ್ಷಿಣ ಕನ್ನಡ ಜಿಲ್ಲಾ ಏಕದಿನ ಸಮಾವೇಶವು ನ.13ರಂದು ಇಲ್ಲಿನ ಎಚ್.ಎಂ.ಆಡಿಟೋರಿಯಂನಲ್ಲಿ ನಡೆಯಲಿರುವುದು.
ಬೆಳಗ್ಗೆ 9:30ರಿಂದ ಸಂಜೆ 6ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಂಘಟನೆಯ ಕೇರಳ ರಾಜ್ಯ ಉಪಾಧ್ಯಕ್ಷ ವಿ.ಟಿ.ಅಬ್ದುಲ್ಲಾ ಕೋಯ ತಂಙಳ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಇಸ್ಲಾಮ್ ಮತ್ತು ಇಸ್ಲಾಮೀ ಆಂದೋಲನ ವರ್ತಮಾನ ಮತ್ತು ಭವಿಷ್ಯ ಎಂಬ ವಿಷಯದಲ್ಲಿ ಭಾಷಣ ಮಾಡುವರು.
ಸಮಾವೇಶದಲ್ಲಿ ‘ಸಮುದಾಯದ ಸಬಲೀಕರಣ ಹೇಗೆ ಸಾಧ್ಯ?’ ಎಂಬ ಮಹತ್ವಪೂರ್ಣ ಚಾವಡಿ ಚರ್ಚೆ ನಡೆಯಲಿದೆ. ಜಿಲ್ಲೆಯ ಪ್ರಮುಖ ಮುಸ್ಲಿಂ ಮುಖಂಡರು ಈ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾವೇಶದ ಸಂಚಾಲಕ ಅಮೀನ್ ಅಹ್ಸನ್ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.