ಅಬ್ಬಕ್ಕ ಉತ್ಸವದ ಕುರಿತು ಪೂರ್ವಭಾವಿ ಸಭೆ

Update: 2016-11-05 17:51 GMT

ಮಂಗಳೂರು, ನ.5: ವೀರರಾಣಿ ಅಬ್ಬಕ್ಕ ಉತ್ಸವ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಸಭೆಯಲ್ಲಿ ಮಾತನಾಡಿ, ಅಬ್ಬಕ್ಕ ಉತ್ಸವಕ್ಕೆ ಸಾರ್ವಜನಿಕರು ಅಭಿಮಾನದಿಂದ ಭಾಗಹಿಸುವಂತಾಗಬೇಕು. ಈ ನಿಟ್ಟಿನಲ್ಲಿ ಈಗಿನಿಂದಲೇ ಅಬ್ಬಕ್ಕನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಆಯೋಜಿಸಬೇಕು ಎಂದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅಬ್ಬಕ್ಕ ಉತ್ಸವ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳನ್ನು ಪೂರ್ವಭಾವಿಯಾಗಿ ನಡೆಸಬೇಕು. ಶಾಲಾ-ಕಾಲೇಜುಗಳಲ್ಲಿ ಅಬ್ಬಕ್ಕನ ಚರಿತ್ರೆಯ ಬಗ್ಗೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಅಬ್ಬಕ್ಕ ಚರಿತ್ರೆ ಜಾಗೃತಿ ಮೂಡಲಿದೆ. ಇಂತಹ ಸ್ಪರ್ಧೆಯಲ್ಲಿ ಮಕ್ಕಳನ್ನು ಅಬ್ಬಕ್ಕ ಉತ್ಸವದಲ್ಲಿ ಗೌರಸಬೇಕು ಎಂದು ಅವರು ಹೇಳಿದರು.

ಅಬ್ಬಕ್ಕ ಪ್ರಶಸ್ತಿಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಿ, ಅವರಲ್ಲಿ ಅಬ್ಬಕ್ಕನ ಚರಿತ್ರೆಯ ಬಗ್ಗೆ ಇರುವ ಜ್ಞಾನವನ್ನು ಪರಿಶೀಲಿಸಿ ಪ್ರಶಸ್ತಿ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷೆ ಜಾನಕಿ ಬ್ರಹ್ಮಾವರ, ಕೊಂಕಣಿ ಸಾತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಮಾಜಿ ಶಾಸಕ ಜಯರಾಮ ಶೆಟ್ಟಿ, ಜಿ.ಪಂ. ಸದಸ್ಯೆ ಧನಲಕ್ಷ್ಮೀ, ದಿನಕರ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News