×
Ad

ದೈಹಿಕ ಪರೀಕ್ಷೆ ವೇಳೆ ಕುಸಿದು ಬಿದ್ದು ಪೇದೆ ಸಾವು

Update: 2016-11-05 23:54 IST

ಗೌರಿಬಿದನೂರು, ನ.5: ತಾಲೂಕಿನ ಪುರ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್‌ಕುಮಾರ್ ಶುಕ್ರವಾರ ಬೆಂಗಳೂರಿನ ಕೋರಮಂಗಳದ ಪೆರೆಡ್ ಗ್ರೌಂಡ್ ನಲ್ಲಿ ಪಿಎಸೈ ಹುದ್ದೆಯ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ ವೇಳೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗೌರಿಬಿದನೂರು ಪುರ ಪೊಲೀಸ್ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಪೇದೆಯಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ಸುರೇಶ್ ಪಿಎಸ್ಸೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ನ.5ರಂದು ಬೆಳಗ್ಗೆ ಬೆಂಗಳೂರು ಕೋರಮಂಗಲದ ಪೆರೇಡ್ ಗ್ರೌಂಡ್‌ನಲ್ಲಿ ನೇಮಕಾತಿ ನಡೆಯುತ್ತಿದ್ದ ವೇಳೆ ಓಡುತ್ತಿರುವಾಗ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಮಡಿವಾಳ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿದರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News