‘ಬರ ಅಧ್ಯಯನ ತಂಡ’ಕ್ಕೆ ಬಿಜೆಪಿ ಮನವಿ
ಬೆಂಗಳೂರು, ನ. 5: ರಾಜ್ಯದಲ್ಲಿನ ಭೀಕರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗವು ಕೇಂದ್ರ ಬರ ಅಧ್ಯಯನ ತಂಡಕ್ಕೆ ಇಂದಿಲ್ಲಿ ಮನವಿ ಸಲ್ಲಿಸಿತು.
ಶನಿವಾರ ಬೆಂಗಳೂರಿನಲ್ಲಿ ಕೇಂದ್ರ ಕೃಷಿ ಮತ್ತು ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ನೀರಜ್ ಅದಿದಮ್ ಅವರ ನೇತೃತ್ವದ ಅಕಾರಿಗಳ ತಂಡವನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವ ನಿಯೋಗ, ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳ ಪೈಕಿ 139 ತಾಲೂಕುಗಳನ್ಛ್ನು ಬರ ಪೀಡಿತ ಎಂದು ಸರಕಾರ ಘೋಷಿಸಿದೆ.
ರಾಜ್ಯದಲ್ಲಿ ಬಹುತೇಕ ಬೆಳೆಗಳು ಸಂಪೂರ್ಣ ನಾಶವಾಗಿ ರಾಜ್ಯದ ಶೇ.75ರಷ್ಟು ಪ್ರದೇಶ ಬರಕ್ಕೆ ತುತ್ತಾಗಿದ್ದು, ಜನತೆ ಕುಡಿಯುವ ನೀರಿಗೂ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಗ್ರಾಮೀಣ ಪ್ರದೇಶದ ಜನತೆ ನಗರ ಪ್ರದೇಶಗಳಿಗೆ ಗುಳೆ ಹೋಗಬೇಕಾಗಿದೆ. ಆದುದರಿಂದ ಕೇಂದ್ರ ಕೂಡಲೇ ರಾಜ್ಯದ ನೆರವಿಗೆ ಧಾವಿಸಬೇಕೆಂದು ಕೋರಿತು.
ಬರದ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸೇರಿದಂತೆ ಜನತೆ ಎದುರಿಸುತ್ತಿರುವ ವಾಸ್ತವ ಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಿಕೊಟ್ಟಿದ್ದು, ಕೇಂದ್ರದಿಂದ ಹೆಚ್ಚಿನ ನೆರವು ಸೇರಿದಂತೆ ವಿಶೇಷ ಪ್ಯಾಕೇಜ್‌ನ ನಿರೀಕ್ಷೆಯಲ್ಲಿದ್ದೇವೆ ಎಂದು ಜಗದೀಶ್ ಶೆಟ್ಟರ್ ಭರವಸೆ ವ್ಯಕ್ತಪಡಿಸಿದರು.
ನಿಯೋಗದಲ್ಲಿ ಸಂಸದ ಸುರೇಶ್ ಅಂಗಡಿ, ಶಾಸಕರಾದ ಚಂದ್ರಕಾಂತ್ ಬೆಲ್ಲದ್, ಜಿ.ಎಚ್.ತಿಪ್ಪಾರೆಡ್ಡಿ ಸೇರಿದಂತೆ ಬಿಜೆಪಿ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.