ಕಾರಣ ಕೇಳಿ ಮೇಯರ್, ಉಪಮೇಯರ್‌ಗೆ ನೋಟಿಸ್
Update: 2016-11-06 00:02 IST
ಬೆಂಗಳೂರು, ನ.5: ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ನೇತೃತ್ವದಲ್ಲಿ ‘ಕರಾಳ ದಿನಾಚರಣೆ’ಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ ಮಹಾ ನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್‌ಗೆ ನಗರಾಭಿವೃದ್ಧಿ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಪಾಲಿಕೆ ಮೇಯರ್ ಸರಿತಾ ಪಾಟೀಲ್ ಹಾಗೂ ಉಪ ಮೇಯರ್ ಸಂಜಯ್ ಸಿಂಧೆ ಅವರಿಗೆ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಅನುಚಿತ ವರ್ತನೆ ತೋರಿದ್ದೀರಿ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಾರದೇಕೆ? ಪಾಲಿಕೆಯನ್ನು ಸೂಪರ್ ಸೀಡ್ ಮಾಡಬಾರದೇಕೆ? ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಅಲ್ಲದೆ, ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ ಬಗ್ಗೆ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಪತ್ರ ಬರೆದಿದ್ದಾರೆ.