×
Ad

ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

Update: 2016-11-06 20:33 IST

ಬೆಂಗಳೂರು, ನ.6: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಜಯಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ. ಬೆಂಗಳೂರು, ನ.6: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಜಯಂತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ. ರವಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸುದೀರ್ಘ ಸಭೆ ನಡೆಸಿದರು.

   ಮುಂಜಾಗ್ರತಾ ಕ್ರಮವಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ, ಕಾನೂನು ಸುವ್ಯವಸ್ಥೆಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಲ್ಲದೆ, ರಾಜ್ಯಾದ್ಯಂತ ವ್ಯಾಪಕ ಕಟ್ಟೆಚ್ಚರ ವಹಿಸಬೇಕೆಂದು ಸಲಹೆ ನೀಡಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಸಮಾಜಘಾತುಕ ಶಕ್ತಿಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಬಂಧಿಸಬೇಕು. ಅಲ್ಲದೆ, ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಕುಮ್ಮಕ್ಕು ನೀಡುವ ಮತ್ತು ಪ್ರಚೋದಿಸುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸಿ ಎಂದು ಅವರು ಸೂಚಿಸಿದರು.

ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವರಿಷ್ಠಾಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಬಿಗಿ ಬಂದೋಬಸ್ತ್ ಕುರಿತು ನಿಗಾ ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

     ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಟಿಪ್ಪು ಜಯಂತಿ ದಿನ ರಾಜ್ಯದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಮೆರವಣಿಗೆ ಹಾಗೂ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 ಟಿಪ್ಪು ಜಯಂತಿ ದಿನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲು ಕೇಂದ್ರ ಸರಕಾರ ಈಗಾಗಲೇ ರಾಜ್ಯಕ್ಕೆ ನಾಲ್ಕು ಕಂಪೆನಿ ಅರೆಸೇನಾ ಪಡೆ ರವಾನಿಸಿದ್ದು, ಇನ್ನೂ 6 ಕಂಪೆನಿ ಅರೆಸೇನಾ ಪಡೆಯನ್ನು ಕಳುಹಿಸಿಕೊಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.

         

  

    ರಾಜ್ಯದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆಯೆಂದು ಬಿಜೆಪಿ ಮುಖಂಡರು ಆರೋಪಿಸುತ್ತಿದ್ದಾರಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿಯಿದ್ದಾಗಲೂ ಹತ್ಯೆಗಳು ನಡೆದಿವೆ. ಆಗ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ  ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆಯೆಂದು ಬಿಜೆಪಿ ಮುಖಂಡರು ಆರೋಪಿಸುತ್ತಿದ್ದಾರಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿಯಿದ್ದಾಗಲೂ ಹತ್ಯೆಗಳು ನಡೆದಿವೆ. ಆಗ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಗೃಹ ಸಚಿವರ ಸಲಹೆಗಾರರಾದ ಕೆಂಪಯ್ಯ, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಸಿಎಂ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ನಿರ್ದೇಶಕ ದಯಾನಂದ್, ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಮೇಘರಿಕ್, ಹಿರಿಯ ಅಧಿಕಾರಿಗಳಾದ ರಾಘವೇಂದ್ರ ಔರಾದ್ಕರ್, ಚರಣ್ ರೆಡ್ಡಿ, ಕಮಲ್ ಫಂತ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News