ಮಂಗಳೂರು: ಆಮಿಷವೊಡ್ಡಿ ಅಪ್ರಾಪ್ತ ವಿದ್ಯಾರ್ಥಿನಿಯ ಅಪಹರಣ - ಆರೋಪಿ ಬಂಧನ

Update: 2016-11-06 16:35 GMT

ಮಂಗಳೂರು, ನ.6: ಕಾಲೇಜೊಂದರ ವಿದ್ಯಾರ್ಥಿನಿಯನ್ನು ಆಮಿಷವೊಡ್ಡಿ ಪುಸಲಾಯಿಸಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅದ್ಯಪಾಡಿಯ ಗಣೇಶ್ (30)ಎಂದು ಗುರುತಿಸಲಾಗಿದೆ.

ಈತ ಬಜಪೆಯ ಬ್ಯಾಂಕೊಂದರಲ್ಲಿ ಅಟೆಂಡರ್ ಕೆಲಸ ಮಾಡುತ್ತಿದ್ದು, ತನ್ನದೇ ಊರಿನ ಅಪ್ರಾಪ್ತೆ (17ವರ್ಷ) ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಅಪಹರಿಸಿದ್ದನೆಂದು ಆರೋಪಿಸಲಾಗಿತ್ತು. ಈ ಬಗ್ಗೆ ನ.3ರಂದು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಇವರಿಬ್ಬರು ಸುಬ್ರಹ್ಮಣ್ಯದಿಂದ ಮಂಗಳೂರಿನತ್ತ ಬರುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಆರೋಪಿ ಗಣೇಶ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿದ್ಯಾರ್ಥಿನಿಯನ್ನು ಸಿಡಬ್ಲ್ಯುಸಿ ಮುಂದೆ ಹಾಜರುಪಡಿಸಿ, ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News