×
Ad

ಪತ್ನಿ ಫಾದರ‍್ ಜೊತೆ ಮಾತನಾಡಿದಕ್ಕೆ ಮನನೊಂದ ಪತಿ ಆತ್ಮಹತ್ಯೆಗೆ ಯತ್ನ

Update: 2016-11-07 15:09 IST

ಶಿವಮೊಗ್ಗ,ನ.7: ಪತ್ನಿ ಫಾದರ‍್ ಜೊತೆ ಫೋನ್‌ ನಲ್ಲಿ ನಿರಂತರ ಮಾತನಾಡುತ್ತಿರುವ ಕಾರಣಕ್ಕಾಗಿ   ಮನನೊಂದ ಪತಿ ವಿಷ ಸೇವಿಸಿ ಆತ್ನಹತ್ಯೆಗೆ ಯತ್ನ ನಡೆಸಿರುವ  ಘಟನೆ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. 
ಗೋಪಾಲ್ ಲೇ ಔಟ್‍ನ ನಿವಾಸಿ ಡಾ.ಕುಟೀನ್ ಆತ್ಮಹತ್ಯೆಗೆ ಯತ್ನಿಸಿದ ವೈದ್ಯ. ಇವರ ಪತ್ನಿಯೂ  ಸಹ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ನಿ ಚರ್ಚ್‍ವೊಂದರ ಫಾದರ್ ಜತೆ ನಿರಂತರ ಫೋನಿನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ ಪತಿ ವೈದ್ಯ ಕುಟೀನ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಈ ವಿಚಾರದಲ್ಲಿ ನಿನ್ನೆ ರಾತ್ರಿ ಪತಿ-ಪತ್ನಿ ನಡುವೆ ಜಗಳ ನಡೆದಿದೆ ಎನ್ನಲಾಗಿದೆ.
ಇಂದು ಬೆಳಗ್ಗೆ ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಕುಟೀನ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿದ್ದಾರೆ. ಸ್ಥಳೀಯರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ವೈದ್ಯನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ . ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News