ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಚ್.ಖಾದರ್ ಅಧಿಕಾರ ಸ್ವೀಕಾರ
ಮಂಗಳೂರು, ನ.7: ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಎಚ್.ಖಾದರ್ ಸೋಮವಾರ ಅಧಿಕಾರ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ತನ್ನ ಅಧಿಕಾರವಧಿಯಲ್ಲಿ ಗೇರುಕೃಷಿಕರಿಗೆ ಪ್ರಯೋಜನಕಾರಿಯಾಗುವಂತಹ ಯೋಜನೆಗಳನ್ನು ರೂಪಿಸಿಕೊಂಡು ಮುನ್ನಡೆಯುವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತಿತರ ನಾಯಕರ ಸಹಕಾರದಿಂದ ಈ ಹುದ್ದೆ ಲಭಿಸಿದೆ. ಇದನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸುವೆ ಎಂದು ಬಿ.ಎಚ್.ಖಾದರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಸಚಿವ ಬಿ.ರಮಾನಾಥ ರೈ, ರಾಜ್ಯ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಮೇಯರ್ ಕೆ. ಹರಿನಾಥ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಪಂ ಸದಸ್ಯೆ ಮಮತಾ ಗಟ್ಟಿ, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಪಂ ಮಾಜಿ ಸದಸ್ಯ ಎ.ಸಿ.ಭಂಡಾರಿ, ಬಂಟ್ವಾಳ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾಂಗ್ರೆಸ್ ಮುಖಂಡರಾದ ಹೇಮನಾಥ ಶೆಟ್ಟಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.