×
Ad

ನ.19ರಂದು ಇಂದಿರಾ ಗಾಂಧಿಯವರ 100ನೆ ಜನ್ಮದಿನಾಚರಣೆ : ಡಾ.ಜಿ.ಪರಮೇಶ್ವರ್

Update: 2016-11-07 19:08 IST

ಮಂಗಳೂರು,ನ.7: ನ.19ರಂದು ದಿ.ಇಂದಿರಾ ಗಾಂಧಿಯವರ 100ನೆೆ ಜನ್ಮದಿನಾಚರಣೆಯನ್ನು ನಗರದ ನೆಹರೂ ಮೈದಾನದಲ್ಲಿ ರಾಜ್ಯ ಪ್ರದೇಶ ಕಾಂಗ್ರೆಸ್‌ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಸುಮಾರು ಒಂದು ಲಕ್ಷ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸಚಿವ ಸಂಪುಟದ ಸದಸ್ಯರು, ರಾಜ್ಯದ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಜನಾರ್ದನ ಪೂಜಾರಿ, ಹರಿಪ್ರಸಾದ್, ಹರಿಪ್ರಸಾದ್, ಧರ್ಮಸಿಂಗ್, ಶಾಂತಾರಾಮ ನಾಯಕ್, ಎಐಸಿಸಿ ಮುಖಂಡರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದಿರಾ ಗಾಂಧಿಯವರ 100ನೆ ಜನ್ಮ ದಿನಾಚರಣೆಯನ್ನು ದೇಶದಾದ್ಯಂತ ಒಂದು ವರ್ಷಗಳ ಕಾಲ ಆಚರಿಸಲಾಗುವುದು. ಕಾಂಗ್ರೆಸ್‌ನ ಹಿರಿಯ ನಾಯಕಿ ದೇಶಕ್ಕೆ ನೀಡಿದ ಕೊಡುಗೆಯ ಬಗ್ಗೆ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಕಾರ್ಯಗಾರ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆರೋಗ್ಯಹಾಗೂ ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್,ಶಾಸಕಿ ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ಬಿ.ಎಲ್.ಶಂಕರ್, ಮೇಯರ್ ಹರಿನಾಥ್, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಎಂ.ಎ.ಗಫೂರ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News