×
Ad

ಟಿಪ್ಪು ಜಯಂತಿಗೆ ಸೂಕ್ತ ಭದ್ರತೆ ಕಲ್ಪಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

Update: 2016-11-07 20:53 IST

ಬೆಂಗಳೂರು, ನ.7: ರಾಜ್ಯ ಸರಕಾರವು ಕಳೆದ ವರ್ಷ ಟಿಪ್ಪು ಜಯಂತಿ ಆಚರಿಸಿದಂತೆ ಈ ಬಾರಿಯೂ ಕೂಡ ನವೆಂಬರ್ 10ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿಯಲ್ಲಿ ಆಚರಿಸಲು ತೀರ್ಮಾನಿಸಿದೆ. ಕಳೆದ ವರ್ಷ ಟಿಪ್ಪು ಜಯಂತಿ ಆಚರಣೆಯ ವೇಳೆ ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದು ಸಾವು-ನೋವು ಸಂಭವಿಸಿತ್ತು. ಅಲ್ಲದೆ, ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸುವ ಬಿಜೆಪಿ-ಸಂಘಪರಿವಾರವು ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುತ್ತಾ ಈ ಬಾರಿಯೂ ರಾಜ್ಯದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡುತ್ತಿವೆ.
ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡದೆ ಶಾಂತಿಯುತವಾಗಿ ಆಚರಣೆಯಲ್ಲಿ ಭಾಗಿಯಾಗಬೇಕೆಂದು ಪಾಪ್ಯುಲರ್ ಫ್ರಂಟ್ ಕರೆ ನೀಡಿದೆ.

ಅಲ್ಲದೇ ಇದೊಂದು ಸರಕಾರಿ ಪ್ರಾಯೋಜಿಕ ಕಾರ್ಯಕ್ರಮವಾಗಿರುವುದರಿಂದ ಜನಸಾಮಾನ್ಯರಿಗೆ ಸೂಕ್ತ ಭದ್ರತೆಯನ್ನು ಒದಗಿಸುವುದು ಸರಕಾರದ ಆದ್ಯತೆಯಾಗಿದೆ. ಬಿಜೆಪಿಯು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಈ ಆಚರಣೆಯನ್ನು ವಿರೋಧಿಸುತ್ತಿದ್ದು, ರಾಜ್ಯದ ಆಡಳಿತ ವ್ಯವಸ್ಥೆಯು ಅವರ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಲು ಹಾಗೂ ಜನತೆಯ ರಕ್ಷಣೆಗಾಗಿ ಸಕಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News