ನ.10ಕ್ಕೆ ಟಿಪ್ಪು ಜಯಂತಿ ಆಚರಣೆ
ಬೆಂಗಳೂರು, ನ. 7: ಮೈಸೂರು ಹುಲಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆ ನ.10 ರಂದು ಬೆಳಗ್ಗೆ 11.00 ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಫಾಟಿಸಲಿದ್ದಾರೆ. ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಹಾಗೂ ವಿಧಾನಸಭೆಯ ಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಸೇರಿದಂತೆ ಹಲವು ಗಣ್ಯರು ಹಾಗೂ ಸಚಿವ ಸಂಪುಟ ಸದಸ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪತ್ರಕರ್ತ ಟಿ. ಗುರುರಾಜ್ ಅವರು ಟಿಪ್ಪು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಜೆ.ಆರ್. ಲೋಬೋ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಉರ್ದು ಸಾಹಿತ್ಯ ಅಕಾಡೆಮಿ, ಅಲ್ಪಸಂಖ್ಯಾತರ ಆಯೋಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.