ಇಂದಿನಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ಅಧ್ಯಯನ ಪ್ರವಾಸ

Update: 2016-11-07 17:47 GMT

  ಸುಬ್ರಹ್ಮಣ್ಯ, ನ.7: ಮಲೆನಾಡು ಜನಹಿತರಕ್ಷಣಾ ವೇದಿಕೆಯ ಕಾರ್ಯಕರ್ತರಿಂದ ಪರಿಸರ ಮತ್ತು ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ಅಧ್ಯಯನಕ್ಕಾಗಿ ನ.8 ರಿಂದ 10ರವರೆಗೆ ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಪ್ರಮುಖರಾದ ಯಶೋಚಂದ್ರ ಪಿ.ಆರ್. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನ.8ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರವಾಸವು ಉದ್ಘಾಟನೆಗೊಳ್ಳಲಿದೆ. ನ.9ರಿಂದ 10ರವರೆಗೆ ಪ್ರವಾಸ ನಡೆಯಲಿದ್ದು, ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಮಡಪ್ಪಾಡಿ, ಅರಂತೋಡು, ಚೆಂಬು ಗ್ರಾಮಗಳಲ್ಲಿ ಪ್ರವಾಸ ನಡೆಯಲಿದೆ. ನಂತರದ ದಿನಗಳಲ್ಲಿ ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಸ ಮುಂದುವರಿಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮೋನಪ್ಪ ಮಾನಾಡು, ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News