ಇಂದು ಟಿಪ್ಪು ಜಯಂತಿ ವಿರುದ್ಧ ಪ್ರತಿಭಟನೆ
Update: 2016-11-07 23:19 IST
ಉಡುಪಿ, ನ.7: ರಾಜ್ಯ ಸರಕಾರ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿಯು ಸಂಘ ಪರಿವಾರದ ಸಂಘಟನೆಗಳ ಜೊತೆ ಸೇರಿ ನ.8ರಂದು ಉಡುಪಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಪರಾಹ್ನ 3ಗಂಟೆಗೆ ಜೋಡುಕಟ್ಟೆಯಿಂದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್‌ವರೆಗೆ ಮೆರವಣಿಗೆ ನಡೆಸಿ, ಬಳಿಕ ಪ್ರತಿಭಟನಾ ಸಭೆ ನಡೆಸಲಾಗುವುದು ಎಂದವರು ತಿಳಿಸಿದರು.