×
Ad

ತುಂಬೆ: ಮಾದಕ ದ್ರವ್ಯ ವಿರೋಧಿ ಅಭಿಯಾನ

Update: 2016-11-07 23:36 IST

ಫರಂಗಿಪೇಟೆ, ನ.7: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಾದಕದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಸಿಎಫ್ಐ ತುಂಬೆ ಘಟಕದ ವತಿಯಿಂದ ತುಂಬೆಯ ಬಿ.ಎ.ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಸದಸ್ಯ ಬಾದುಷಾ ತೋಡಾರ್ ಅವರು ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕದ್ರವ್ಯಗಳ ದುಶ್ಚಟಗಳ ದುಷ್ಪರಿಣಾಮಗಳ ಕುರಿತು ವಿವರಿಸಿ, ಮಾದಕದ್ರವ್ಯ ವ್ಯಸನದಿಂದ ದೂರ ಉಳಿಯುವಂತೆ ಕರೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News