ಮೈಸೂರು, ನ.7: ದೇಶದಲ್ಲೇ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕ ಮೊದಲ ಸ್ಥಾನ ಗಳಿಸಿದ್ದು ಇತ್ತೀಚೆಗೆ ಕೇಂದ್ರದ ಹಣಕಾಸು ಸಚಿವರು ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ನೀಡಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ 2 ವರ್ಷಗಳಿಂದ ಬರಗಾಲವನ್ನು ಎದುರಿಸುತ್ತಿದೆ. ಈ ಸಾಲಿನಲ್ಲಿ 139 ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಷೋಷಿಸಲಾಗಿದೆ. ಈ ಪರಿಸ್ಥಿತಿಯಲ್ಲಿ ಕರ್ನಾಟಕ ಆರ್ಥಿಕ ಬೆಳವಣಿಗೆಯಲ್ಲಿ ಮೊದಲ ಸ್ಥಾನ ಗಳಿಸಿರುವುದು ಶ್ಲಾಘನೀಯ ವಿಷಯವಾಗಿದೆ ಎಂದರು.ಬಾರಿ ಜಲಾಶಯದಲ್ಲಿ ಶೇ.50ರಷ್ಟು ನೀರಿನ ಕೊರತೆ ಉಂಟಾಗಿದ್ದು, ಬೆಳೆಗಳಿಗೆ ನೀರು ಹರಿಸುವ ಬಗ್ಗೆ ನೀರಾವರಿ ಇಲಾಖಾ ಅಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.