ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಚಾರ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ
ಬೆಂಗಳೂರು, ನ.7: ಮೂಲಭೂತ ಕರ್ತವ್ಯಗಳ ಬಗ್ಗೆ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಜಾಗೃತಿ ಮೂಡಿಸುತ್ತಿರುವ ಕುರಿತು ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಲು ಹೈಕೋರ್ಟ್ ಸೂಚಿಸಿದೆ.
ಟಿ.ವಿ.ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯ ಕ್ರಮ ಮತ್ತು ಜಾಹೀರಾತುಗಳ ಮೇಲೆ ನಿಯಂತ್ರಣ ಹೇರಲು ನಿರ್ದೇಶಿಸುವಂತೆ ಕೋರಿ ಮೆಗಾ ಮೂವೀಸ್‌ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.ವೇಳೆ ಹಾಜರಿದ್ದ ಕರ್ನಾಟಕ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ(ಕುಸ್ಮಾ)ದ ಪರ ವಕೀಲ ಕೆ.ವಿ.ಧನಂಜಯ್, ಮೂಲಭೂತ ಕರ್ತವ್ಯಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆಗೆ ಜಾಗೃತಿ ಕಾರ್ಯಕ್ರ ಮಗಳನ್ನು ಹಮ್ಮಿಕೊಂಡಿರುವ ಕುರಿತ ವಿವರಣೆ ನೀಡಲು ಸೂಚಿಸಿ ಕೈಗೊಂಡಿರುವ ಬಗ್ಗೆ ಮಾಹಿತಿ ನೀಡಿ ಎಂದು ತಿಳಿಸಿ ವಿಚಾರಣೆ ಮುಂದೂಡಿತು.ಲ್ಲದೆ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಒಕ್ಕೂಟ(ಎ್ಕೆಸಿಸಿಐ), ಬೆಂಗಳೂರು ನೌಕರರ ಸಂಘ(ಬಿಇಎ), ಮಜ್ದೂರ್ ಸಂಘ ಮತ್ತು ವಕೀಲರ ಸಂಘಗಳು ಮೂಲಭೂತ ಕರ್ತವ್ಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ನ್ಯಾಯಮೂರ್ತಿಗಳು ಇದೇ ವೇಳೆ ಮೌಖಿಕವಾಗಿ ಸೂಚನೆ ನೀಡಿದರು. ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ ಹಾಜರಾಗಿ, ಕೇಬಲ್ ಟೆಲಿ ವಿಷನ್ ನೆಟ್‌ವರ್ಕ್ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಸಮಿತಿಗಳ ರಚನೆ ಮಾಡಿದರೆ ಸಾಕಾಗುವುದಿಲ್ಲ. ಅವು ಹೇಗೆ ಕರ್ತವ್ಯ ನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ನ.15ಕ್ಕೆ ಮುಂದೂಡಿದರು.