‘ಬರ ಸ್ಥಿತಿ’ ಕೃಷಿ ಸಾಲ ಮನ್ನಾಕ್ಕೆಸಿಪಿಐ ಆಗ್ರಹ
Update: 2016-11-08 00:09 IST
ಬೆಂಗಳೂರು, ನ. 7: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ಯಲ್ಲಿ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಬೆಳೆ ನಷ್ಟದ ಆಧಾರದ ಮೇಲೆ ಬೆಳೆ ವಿಮೆ ನಿಗದಿಪ ಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಸಿಪಿಐ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ.
ಸೋಮವಾರ ಬೆಂಗಳೂರು ನಗರ ಜಿಲ್ಲಾಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಸಿಪಿಐ ಜಿಲ್ಲಾಕಾರಿಗೆ ಮನವಿ ಸಲಿಸಿತು. ಮೇವು ಬ್ಯಾಂಕ್ ಸ್ಥಾಪಿಸಿ, ಕುಡಿಯುವ ನೀರು ಒದಗಿಸಬೇಕು. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ.
ಸುಮಾರು 15 ಸಾವಿರ ಕೋಟಿ ರೂ.ಗಳಿಗೂ ಅಕ ನಷ್ಟ ಸಂಭವಿಸಿದ್ದು, ಕೇಂದ್ರ ಸರಕಾರ ಕೂಡಲೇ ಕರ್ನಾಟಕ ರಾಜ್ಯದ ನೆರವಿಗೆ ಧಾವಿಸಬೇಕು. ನಿರಂತರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಸಿಪಿಐ ಒತ್ತಾಯಿಸಿದೆ.