ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ರಸೀನಾ ಸಿ.ಎಚ್. ದ್ವಿತೀಯ
Update: 2016-11-08 18:34 IST
ಬಂಟ್ವಾಳ, ನ.8: ಕರ್ನಾಟಕ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಸ್ಮರಣಾರ್ಥ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ರಸೀನಾ ಸಿ.ಎಚ್. ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಅಲ್ಲದೆ, ಕರ್ನಾಟಕ ಸರಕಾರದ ಆರೋಗ್ಯ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.