ಟಿಪ್ಪು ಜಯಂತಿ: ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಸೆಕ್ಷನ್ ಜಾರಿ
Update: 2016-11-08 19:41 IST
ಮಂಗಳೂರು, ನ. 8: ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ಶಾಂತಿಯುತ ಮತ್ತು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 12ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯಾದ್ಯಂತ ಸೆ.144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ದಿನದಂದು ಯಾವುದೇ ಸಾರ್ವಜನಿಕ, ರಾಜಕೀಯ ಮುಂತಾದ ಬಹಿರಂಗ ಸಭೆ, ಸಮಾರಂಭ, ಜಾಥಾ, ಮೆರವಣಿಗೆಗಳನ್ನು ನಡೆಸುವಂತಿಲ್ಲ. ನವೆಂಬರ್ 10ರಂದು ಟಿಪ್ಪು ಆಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಹಾಗೂ ಶಾಂತಿ ಸವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟನೆ ತಿಳಿಸಿದೆ.