ಹೋಮ್‌ಸ್ಟೇ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ವ್ಯವಸ್ಥೆ: ಪ್ರಮೋದ್

Update: 2016-11-08 18:37 GMT

ಮಲ್ಪೆ, ನ.8: ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಲ್ಪೆ ಬೀಚ್ ತೀರದ ನಿವಾಸಿಗಳು ತಮ್ಮ ಮನೆಗಳಲ್ಲಿ ಹೋಮ್ ಸ್ಟೇ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಆದಾಯಗಳಿಸುವ ಅವಕಾಶವಿದ್ದು, ಜಿಲ್ಲಾಡಳಿತ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ವತಿಯಿಂದ ರವಿವಾರ 11.70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ರಿಕ್ಷಾ ನಿಲ್ದಾಣ, ವಾಕಿಂಗ್ ಟ್ರಾಕಿಂಗ್ ಬಳಿ ಅಳವಡಿಸಲಾದ ಎಲ್‌ಇಡಿ ದಾರಿದೀಪದ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರಸಭಾಧ್ಯಕ್ಷೆ ಮೀನಾಕ್ಷಿ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ಸದಸ್ಯರಾದ ಪ್ರಶಾಂತ್ ಅಮೀನ್ ಕೊಳ, ಗಣೇಶ್ ನೆರ್ಗಿ, ನಾರಾಯಣ ಕುಂದರ್, ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ, ವಂದಿಸಿದರು.

ಮಲ್ಪೆ ಬೀಚ್‌ನಲ್ಲಿ ಮತ್ಸ ಮೇಳ:

ಸರಕಾರ ಪ್ರತಿವರ್ಷ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಮತ್ಸಮೇಳವನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ನಡೆಸುತ್ತಿದ್ದು, ಈ ಬಾರಿ ಮತ್ಸಮೇಳವನ್ನು ಮಲ್ಪೆ ಬೀಚ್‌ನಲ್ಲಿ ನಡೆಸುವಂತೆ ಆದೇಶವನ್ನು ಹೊರಡಿಸಿದ್ದೇನೆ.

ಸಚಿವ ಪ್ರಮೋದ್ ಮಧ್ವರಾಜ್,  ರಾಜ್ಯ ಮೀನುಗಾರಿಕಾ ಸಚಿವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News