×
Ad

ರಾಜೇಶ್ವರಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ

Update: 2016-11-09 21:18 IST

ಉಡುಪಿ, ನ.9: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಅರ್ಜಿಗೆ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಇಂದು ಆಕ್ಷೇಪಣೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ರಾಜೇಶ್ವರಿ ಶೆಟ್ಟಿಗೆ ಜಾಮೀನು ನೀಡದಂತೆ ಶಾಂತರಾಮ್ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ವಾದ ಮಂಡಿಸಲು ಆರೋಪಿ ಪರ ವಕೀಲ ಅರುಣ್ ಕುಮಾರ್ ಬೆಳುವಾಯಿ ಸಮಯಾವಕಾಶವನ್ನು ಕೇಳಿದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಶಂಕರ ಅಮರಣ್ಣನವರ್ ಮುಂದಿನ ವಿಚಾರಣೆಯನ್ನು ನ.16ಕ್ಕೆ ಮುಂದೂಡಿ ಆದೇಶ ನೀಡಿದರು.  ಅಂದು ಆರೋಪಿ ವಕೀಲರು ತಮ್ಮ ವಾದವನ್ನು ಮಂಡಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News