ಫಿಲಿಪ್ಪೀನ್ಸ್ ಅಧ್ಯಕ್ಷರಿಂದ ಅಭಿನಂದನೆ
Update: 2016-11-10 00:21 IST
ಮನಿಲಾ, ನ. 9: ಫಿಲಿಪ್ಪೀನ್ಸ್ ಅಧ್ಯಕ್ಷ ರಾಡ್ರಿಗೊ ಡುಟರ್ಟ್‌ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಅಭಿನಂದಿಸಿದ್ದಾರೆ ಹಾಗೂ ಉಭಯ ದೇಶಗಳ ಸಂಬಂಧವನ್ನು ವೃದ್ಧಿಸಲು ಅವರೊಂದಿಗೆ ಜೊತೆಯಾಗಿ ಕೆಲಸ ಮಾಡುವುದನ್ನು ಎದುರುನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಫಿಲಿಪ್ಪೀನ್ಸ್ ಅಧ್ಯಕ್ಷರು ಪ್ರತಿ ದಿನವೆಂಬಂತೆ ಅಮೆರಿಕದ ಹಾಲಿ ಒಬಾಮ ಆಡಳಿತದ ವಿರುದ್ಧ ಕೆಂಡ ಕಾರುತ್ತಿದ್ದಾರೆ ಹಾಗೂ ಅಮೆರಿಕದೊಂದಿಗಿನ ಒಪ್ಪಂದವನ್ನು ರದ್ದುಪಡಿಸುವ ಬೆದರಿಕೆಯೊಡ್ಡುತ್ತಿದ್ದಾರೆ.