ಫಲಾಹ್ ವಿದ್ಯಾಸಂಸ್ಥೆಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ

Update: 2016-11-10 13:11 GMT

ತಲಪಾಡಿ, ನ.10: ಫಲಾಹ್ ವಿದ್ಯಾಸಂಸ್ಥೆಯಲ್ಲಿ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಿಜೃಂಭಣೆಯಿಂದ ಆಚರಿಸಲಾಯಿತು.

ಸಂಸ್ಥೆಯ ಕೋಶಾಧಿಕಾರಿ ಹಾಜಿ ಇಸ್ಮಾಯೀಲ್ ನಾಗತೋಟ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸಿರನ್, ಕನ್ನಡ ಮಾಧ್ಯಮ ಪ್ರೌಢಶಾಲೆಯ ಹಿರಿಯ ಶಿಕ್ಷಕಿ ಐರಿನ್ ರೋಡ್ರಿಗಸ್, ವಿದ್ಯಾರ್ಥಿ ಶಾರುದ್ದೀನ್ ಟಿಪ್ಪು ಸುಲ್ತಾನ್‌ನ ಜೀವನ ಚರಿತ್ರೆಯ ಬಗ್ಗೆ ಮಾತನಾಡಿದರು.

8ನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಉದೈಫ್ ಭಾಷಣಗೈದರು. ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ಬಾಸ್ ಮಜಲ್, ಉಪಾಧ್ಯಕ್ಷ ಯು.ಬಿ.ಮುಹಮ್ಮದ್, ಮ್ಯಾನೇಜರ್ ಅಹ್ಮದ್ ಬಾವ, ಕಾಲೇಜು ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್, ಕನ್ನಡ ಮಾಢ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಅರ್ಫಾಝ್ ಸ್ವಾಗತಿಸಿ, ಮುಹಮ್ಮದ್ ಶಾರೂನ್ ವಂದಿಸಿದರು. ವಿದ್ಯಾರ್ಥಿನಿ ಸುನೈನಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News