×
Ad

ನ.12:ಮಂಗಳೂರಿನಲ್ಲಿ ಸುನ್ನಿ ಶಿಕ್ಷಣ ಸಮಿತಿಯ ಸ್ಫಟಿಕ ಸಮ್ಮೇಳನ

Update: 2016-11-10 19:18 IST

ಮಂಗಳೂರು, ನ.10: ಸುನ್ನಿ ಎಜುಕೇಶನಲ್ ಡೆವಲಪ್‌ಮೆಂಟ್ ಕಮಿಟಿ ಆಫ್ ಕರ್ನಾಟಕ (ಎಸ್‌ಇಡಿಸಿ) ಇದರ 15ನೆ ವಾರ್ಷಿಕದ ಸಮಾರೋಪದ ಅಂಗವಾಗಿ ನ.12ರಂದು ನಗರದ ನೆಹರೂ ಮೈದಾನದಲ್ಲಿ ಬೃಹತ್ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಮಧ್ಯಾಹ್ನ 12 ಗಂಟೆಗೆ ನಗರದ ಬಾವುಟಗುಡ್ಡೆ ಈದ್ಗಾ ಮಸೀದಿಯಿಂದ ಪುರಭವನದ ತನಕ ಮದ್ರಸ ಅಧ್ಯಾಪಕರ ಕಾಲ್ನಡಿಗೆ ಜಾಥಾ ನಡೆಯಲಿದೆ. ಬಳಿಕ ಪುರಭವನದಲ್ಲಿ ಶೈಕ್ಷಣಿಕ ಸಮಾವೇಶ ಜರಗಲಿದೆ. ಅಖಿಲ ಭಾರತ ಇಸ್ಲಾಮಿ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಪ್ರೊ. ಎ.ಕೆ. ಅಬ್ದುಲ್ ಹಮೀದ್ ಅಧ್ಯಕ್ಷತೆ ವಹಿಸಲಿದ್ದು, ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹೀಂ ಉದ್ಘಾಟಿಸಲಿದ್ದಾರೆ.

ಸಂಜೆ 4ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಸಂಯುಕ್ತ ಖಾಝಿ ಸೈಯದ್ ಕೂರತ್ ತಂಙಳ್ ದುಆ ಮಾಡಲಿದ್ದು, ಅಖಿಲ ಭಾರತ ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಕೇಂದ್ರ ಸಮಿತಿಯ ಅಧ್ಯಕ್ಷ ಸೈಯದ್ ಅಲಿ ಬಾಫಖಿ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಸುನ್ನಿ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಮುಖ್ಯ ಪ್ರಭಾಷಣ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಮಸ್ತ ಉಪಾಧ್ಯಕ್ಷ ಶೈಖುನಾ ಅಲಿಕುಂಞಿ ಮುಸ್ಲಿಯಾರ್, ಎಸ್‌ಇಡಿಸಿ ಸುನ್ನಿ ಸೆಂಟರ್ ಅಧ್ಯಕ್ಷ ಸೈಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್, ಕೇರಳ ಮುಸ್ಲಿಮ್ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೈಯದ್ ಖಲೀಲುಲ್ ಬುಖಾರಿ ಕಡಲುಂಡಿ, ಎಸ್‌ವೈಎಸ್ ಕೇರಳ ರಾಜ್ಯಾಧ್ಯಕ್ಷ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನಿ ಕಾಮಿಲ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಶಾಫಿ ಸಅದಿ ಮುಖ್ಯಭಾಷಣ ಮಾಡಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹೀಂ, ಆಹಾರ ಸಚಿವ ಯು.ಟಿ. ಖಾದರ್, ಶಿಕ್ಷಣ ಸಚಿವ ತನ್ವೀರ್ ಸೇಠ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಬಿ.ಎ. ಮೊಯ್ದಿನ್ ಬಾವ, ಜೆ.ಆರ್ ಲೋಬೊ, ಅಭಯಚಂದ್ರ ಜೈನ್, ಐವನ್ ಡಿಸೋಜ, ಮೇಯರ್ ಹರಿನಾಥ್ ಉದ್ಯಮಿಗಳಾದ ಹಾಜಿ ಯೆನೆಪೊಯ ಅಬ್ದುಲ್ಲ ಕುಂಞಿ, ಕಣಚೂರು ಮೋನು ಹಾಜಿ, ಹಾಜಿ ಬಿ.ಎಂ. ಫಾರೂಕ್ ಬೆಂಗಳೂರು, ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮುಹಮ್ಮದ್ ಮಸೂದ್, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಮೂಡ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಆಳ್ವಾಸ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಮೋಹನ್ ಆಳ್ವ ಭಾಗವಸಹಿಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಾಣಿ ಉಸ್ತಾದ್, ಅಬ್ಬಾಸ್ ಉಸ್ತಾದ್, ಎಡಪ್ಪಾಲಂ ಮಹ್ಮೂದ್ ಮುಸ್ಲಿಯಾರ್, ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ, ಎಸ್‌ವೈಎಸ್ ರಾಜ್ಯಾಧ್ಯಕ್ಷ ಕೆ.ಪಿ. ಹುಸೈನ್ ಸಅದಿ ಕೆ.ಸಿ.ರೋಡ್, ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್, ಮುಸ್ಲಿಂ ಜಮಾಅತ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅಬೂಸುಫ್‌ಯಾನ್ ಮದನಿ, ಪಳ್ಳಂಗೋಡ್ ಅಬ್ದುಲ್ ಖಾದರ್ ಮದನಿ, ಹೈದರ್ ಪರ್ತಿಪ್ಪಾಡಿ, ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುರ್ರಶೀದ್ ಹಾಜಿ, ಡಾ.ಯು.ಟಿ. ಇಫ್ತಿಕಾರ್, ಕೆಸಿಎಫ್ ಅಂತಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖ್ ಬಾವ ಅಬುಧಾಬಿ, ಡಿಕೆಎಸ್‌ಸಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಇಸ್ಮಾಯೀಲ್ ಕಿನ್ಯ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ಹಾಜಿ ಬಿ. ಕುಂಞಿಅಹ್ಮದ್, ಅಬ್ದುರ್ರವೂಫ್ ಪುತ್ತಿಗೆ, ಮನ್ಸೂರ್ ಅಹ್ಮದ್ ಆಝಾದ್, ಹಾಜಿ ಅನ್ವರ್ ಶರೀಫ್ ಬೆಂಗಳೂರು, ಹಾಜಿ ಎಸ್.ಎಸ್.ಎ. ಖಾದರ್ ಬೆಂಗಳೂರು, ಕಾರ್ಪೋರೇಟರ್‌ಗಳಾದ ಅಬ್ದುರ್ರವೂಫ್ ಬಜಾಲ್, ಅಬ್ದುಲ್ ಅಝೀಝ್ ಕುದ್ರೋಳಿ, ಅಬ್ದುಲ್ಲತೀಫ್ ಕಂದಕ್ ಮುಂತಾದವರು ಭಾಗವಹಿಸಲಿದ್ದಾರೆ.

ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ ಹಾಗೂ ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ. ಕಾಮಿಲ್ ಸಖಾಫಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News