×
Ad

ಕೇರಳ ಕಾಂಗ್ರೆಸ್ ನಾಯಕರಿಂದ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

Update: 2016-11-10 23:56 IST

ಬೆಂಗಳೂರು, ನ.10: ಸಚಿವ ಡಿ.ಕೆ ಶಿವಕುಮಾರ್ ಮನೆಗೆ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಕೇರಳ ಕಾಂಗ್ರೆಸ್ ನಾಯಕರು ಗುರುವಾರ ಭೇಟಿ ನೀಡಿದರು.

ಈ ವೇಳೆ ಮುಂದಿನ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆ ಬಗ್ಗೆ ಚರ್ಚಿಸ ಲಾಗಿದ್ದು, ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಅಕಾರ ಕಳೆದುಕೊಳ್ಳುವುದು ಬೇಡ ಎಂದು ಉಮ್ಮನ್‌ಚಾಂಡಿ ಡಿ.ಕೆ.ಶಿವಕುಮಾರ್‌ಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ಚುನಾವಣೆಗೆ ರಾಜ್ಯದಲ್ಲಿ ಈಗಿನಿಂದಲೇ ತಯಾರಿ ಆರಂಭಿಸಬೇಕು. ಪಕ್ಷ ಸಂಘಟನೆಗೆ ಮಹತ್ವ ನೀಡಬೇಕಿದೆ. ರಾಜ್ಯದಲ್ಲಿರುವ ಕೇರಳದವರನ್ನು ಕಾಂಗ್ರೆಸ್ ಕಡೆ ಸೆಳೆಯುವುದಕ್ಕೆ ಅಗತ್ಯ ನೆರವನ್ನು ಕೇರಳದ ಕಾಂಗ್ರೆಸ್ ಮುಖಂಡರು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಕೆಪಿಸಿಸಿ ಪದಾಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News