ಘಾಝಿಯಾಬಾದ್ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ; 13 ಮಂದಿ ಸಜೀವ ದಹನ

Update: 2016-11-11 04:25 GMT

ಗಾಝಿಯಾಬಾದ್‌, ನ.11: ಉತ್ತರ ಪ್ರದೇಶದ ಘಾಝಿಯಾಬಾದ್ ನ ಸಾಹಿಬಾಬಾದ್ ನಲ್ಲಿರುವ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ದುರಂತದಿಂದಾಗಿ 13 ಮಂದಿ ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ
ಇಂದು ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ದುರಂತಕ್ಕೆ ಕಾರಣ ಗೊತ್ತಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News