ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ 21 ಕೋ.ರೂ. ಅನುದಾನ ಬಿಡುಗಡೆ

Update: 2016-11-11 18:37 GMT

ಬಂಟ್ವಾಳ, ನ. 11: ನಬಾರ್ಡ್ ಯೋಜನೆಯಡಿ 3 ಸಮುದಾಯ ಆರೋಗ್ಯ ಕೇಂದ್ರ, 4 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 5 ಆರೋಗ್ಯ ಉಪ ಕೇಂದ್ರಗಳ ಕಟ್ಟಡಗಳ ಪುನರ್ ನಿರ್ಮಾಣಕ್ಕೆ 21 ಕೋ.ರೂ. ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.
ದ.ಕ. ಜಿಪಂ, ಮಂಗಳೂರು ತಾಪಂ, ಬಂಟ್ವಾಳ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣ ಯೋಜನೆಯ ಇವುಗಳ ಸಂಯುಕ್ತಾಶ್ರಯದಲ್ಲಿ 1.30 ಕೋ.ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳಲಿರುವ ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಬಳಿಕ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮಂಚಿ ಗ್ರಾಮವನ್ನು ಸೇರಿಸಿಕೊಳ್ಳಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಬಂಟ್ವಾಳದ ತಾಲೂಕು ಆರೋಗ್ಯ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳಲಿದೆ ಎಂದರು. ಈ ಸಂದರ್ಭದಲ್ಲಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಎಂ.ಎಸ್.ಮುಹಮ್ಮದ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ತಾಪಂ ಸದಸ್ಯ ನಾರಾಯಣ ಶೆಟ್ಟಿ, ಮಂಚಿ ಗ್ರಾಪಂ ಅಧ್ಯಕ್ಷೆ ಪ್ರಮೀಳಾ, ಕೊಳ್ನಾಡು ಗ್ರಾಪಂ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್, ಸಾಲೆತ್ತೂರು ಗ್ರಾಪಂ ಅಧ್ಯಕ್ಷೆ ಚಂದ್ರಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಕೆಎಚ್‌ಎಸ್‌ಡಿಆರ್‌ಪಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಘುಚಂದ್ರ ಹೆಬ್ಬಾರ್, ಮಂಚಿ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ. ವೇದಾವತಿ ಉಪಸ್ಥಿತರಿದ್ದರು.
 ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕ ಎಫ್.ಎನ್. ಧವಳೆ ವಂದಿಸಿದರು. ಜಯರಾಮ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.


ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರಕಾರದ ಕೆಲಸ ಆದರೆ ಆಸ್ಪತ್ರೆಗೆ ಬರುವ ಅನಾರೋಗ್ಯ ಪೀಡಿತರಿಗೆ ಪ್ರೀತಿ ಹಾಗೂ ನಗುಮೊಗದ ಸೇವೆ ಕೊಡುವುದು ಅಲ್ಲಿನ ವೈದ್ಯರು ಹಾಗೂ ಸಿಬ್ಬಂದಿಯ ಕೆಲಸ. ಬೇಡಿಕೆಗನುಗುಣವಾಗಿ ಎಲ್ಲ ಔಷಧಗಳು ಸರಕಾರಿ ಆಸ್ಪತ್ರೆಯಲ್ಲಿಯೇ ಸಿಗಬೇಕೆಂಬ ನಿಟ್ಟಿನಲ್ಲಿ 300 ಕೋ.ರೂ. ಅನುದಾನವನ್ನು ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸಾರ್ವಜನಿಕರು ಸರಕಾರದ ಆರೋಗ್ಯ ಯೋಜನೆಗಳನ್ನು ಬಳಸಿಕೊಳ್ಳಬೇಕು.


- ಯು.ಟಿ.ಖಾದರ್, ಸಚಿವ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News