ಇಬ್ಬರ ವಿರುದ್ಧ ಪ್ರಕರಣ ದಾಖಲು
ಉಡುಪಿ, ನ.11: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರನ್ನು ಫೇಸ್‌ಬುಕ್‌ನಲ್ಲಿ ನಿಂದಿಸಿರುವ ಇಬ್ಬರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂಬ ಪೋಸ್ಟ್‌ಗೆ ಕಿಡಿಗೇಡಿಗಳಾದ ವಿಕ್ರಮ್ ಎಂ. ಕುಂದಾಪುರ ಮತ್ತು ರಂಜಿತ್ ಯಾನೆ ರಂಜು ಶೆಟ್ಟಿ ಎಂಬವರು ಅಂಬೇಡ್ಕರ್‌ರನ್ನು ತೀರಾ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಮೆಂಟ್ಸ್ ಹಾಕಿದ್ದರು ಎಂದು ತಿಳಿದು ಬಂದಿದೆ.
ಅಂಬೇಡ್ಕರ್‌ಗೆ ಅಪಮಾನ ಮಾಡಿರುವುದರ ವಿರುದ್ಧ ದಸಂಸ ತಾಲೂಕು ಸಂಚಾಲಕ ವಿಜಯ ಕೆ.ಎಸ್. ಶುಕ್ರವಾರ ಕುಂದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಮಧಿಸಿ ಈ ಇಬ್ಬರು ಕಿಡಿಗೇಡಿಗಳ ವಿರುದ್ಧ ದಸಂಸ ಕಾರ್ಯಕರ್ತರು ಗಂಗೊಳ್ಳಿ, ಅಮಾಸೆಬೈಲು, ಶಂಕರನಾರಾಯಣ, ಕೋಟ, ಹೆಬ್ರಿ ಪೊಲೀಸ್ ಠಾಣೆಗಳಲ್ಲಿಯೂ ದೂರು ನೀಡಿರುವ ಬಗ್ಗೆ ವರದಿಯಾಗಿದೆ.