ಪೊಲೀಸರಿಂದ ಕಿರುಕುಳ: ಆರೋಪ
Update: 2016-11-12 00:24 IST
ಮಂಗಳೂರು, ನ.11: ಕುತ್ತಾರಿನಲ್ಲಿ ಆರೆಸ್ಸೆಸ್ ಮುಖಂಡ ರಾಮಮೋಹನ್‌ರನ್ನು ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳನ್ನು ಹುಡುಕುವ ನೆಪದಲ್ಲಿ ಉಳ್ಳಾಲ ಮತ್ತು ಕೊಣಾಜೆ ಠಾಣಾ ಪೊಲೀಸರು ಕೆಲವು ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿ ಮನೆಮಂದಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಎರಡೂ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮದಕ, ಎಲಿಯಾರು, ಎಲಿಯಾರುಪದವು, ಬಾರ್ತಡ್ಕ ಮೊದಲಾದ ಪ್ರದೇಶಗಳಲ್ಲಿ ಆರೋಪಿಗಳನ್ನು ಹುಡುಕುವ ನೆಪದಲ್ಲಿ ಪೊಲೀಸರು ಗುರುವಾರ ರಾತ್ರಿ ಮನೆಗಳಿಗೆ ಅಕ್ರಮ ಪ್ರವೇಶ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಮದಕ ಜಂಕ್ಷನ್‌ನಲ್ಲಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಅಲ್ಲದೆ, ಅಲ್ಲಿನ ಮನೆಗಳಿಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.