×
Ad

ವಿವೇಕಾನಂದ ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳಕ್ಕೆ ಸಿದ್ಧತೆ

Update: 2016-11-12 12:24 IST

ಪುತ್ತೂರು, ನ.12: ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ವಿವೇಕಾನಂದ ವಿದ್ಯಾವರ್ಧಕ ಸಂಘವು ಪ್ರಥಮ ಬಾರಿಗೆ ನೆಹರು ನಗರದ ವಿವೇಕಾನಂದ  ಕ್ಯಾಂಪಸ್ ನಲ್ಲಿ  2017ರ ಜನವರಿ 13ರಂದು ಉದ್ಯೋಗಮೇಳ ಆಯೋಜನೆಗೊಳ್ಳುತ್ತಿದ್ದು, ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಈಗಾಗಲೇ ಸಂಪರ್ಕಿಸಲಾಗಿದೆ. ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಈ ಭಾಗದ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ. ಮಾಹಿತಿ ತಂತ್ರಜ್ಞಾನ, ರಿಯಲ್ ಎಸ್ಟೇಟ್, ಬ್ಯಾಂಕಿಂಗ್, ರಿಟೇಲ್ ಕ್ಷೇತ್ರದ ಉದ್ಯಮ, ಉತ್ಪಾದನಾ ಘಟಕಗಳೇ ಮೊದಲಾದ ಅನೇಕ ಉದ್ಯಮಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರು ಭಾಗವಹಿಸಬಹುದು?
ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಪಾರಂಪರಿಕ ಪದವಿಗಳಾದ ಬಿಎ, ಬಿಎಸ್ಸಿ, ಬಿಕಾಂ ಮುಂತಾದ ಪದವೀಧರರು, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಎಂಬಿಎ  ಹೀಗೆ ಇನ್ನೂ ಹಲವಾರು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ರಾಜ್ಯದ ಯಾವುದೇ ಭಾಗದ ಉದ್ಯೋಗಾರ್ಥಿಗಳು  ಮೇಳದಲ್ಲಿ ಭಾಗವಹಿಸಬಹುದು.


ಏನು ಮಾಡಬೇಕು?

ಈಗಾಗಲೇ ಈ ಉದ್ಯೋಗ ಮೇಳದ ಹಿನ್ನಲೆಯಲ್ಲಿ ವೆಬ್ ಸೈಟ್ ಒಂದನ್ನು ರೂಪಿಸಲಾಗಿದೆ. ಆ ವೆಬ್ ಸೈಟ್ ನಲ್ಲಿರುವ ಅರ್ಜಿಯನ್ನು ತುಂಬಿ ಭಾಗವಹಿಸುವ ಉಮೇದುಗಾರಿಕೆಯನ್ನು ನೋಂದಾವಣೆ ಮಾಡಬೇಕು. ವೆಬ್ ಸೈಟ್ ವಿಳಾಸ: www.vivekaudyoga.com.

 ವೆಬ್ ಸೈಟ್ ನಲ್ಲಿ ದಾಖಲೆ ಮಾಡಲು ಸಾಧ್ಯವಾಗದವರು ನೆಹರು ನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾಗಿರುವ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ನೇರವಾಗಿ ಆಗಮಿಸಿ ಅಥವಾ 8105650443/08251-298599 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು. ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಕೆಲವು ದಿನಗಳ ಅನಂತರ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆಯ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಈ ಮಾಹಿತಿ ಕೇಂದ್ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ತೆರೆದಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News