×
Ad

ಪಾಂಡೇಶ್ವರ ಓಲ್ಡ್ ಕೆಂಟ್ ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Update: 2016-11-12 14:07 IST

ಮಂಗಳೂರು, ನ.12: ನಗರದ ಪಾಂಡೇಶ್ವರದ ಓಲ್ಡ್ ಕೆಂಟ್ ಕಾಂಕ್ರಿಟೀಕರಣ ರಸ್ತೆಯನ್ನು ಎಂ.ವಿ.ಶೆಟ್ಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ರಾಮ್‌ಗೋಪಾಲ್ ಶೆಟ್ಟಿ ಶನಿವಾರ ಉದ್ಘಾಟಿಸಿದರು.

ಶಾಸಕ ಜೆ.ಆರ್. ಲೋಬೊ ಮಾತನಾಡಿ, ನಗರದ ಹೃದಯಭಾಗಕ್ಕೆ ಹತ್ತಿರದ ಈ ರಸ್ತೆಯು ಸಂಚಾರಕ್ಕೆ ಅಯೋಗ್ಯವಾಗಿತ್ತು. ಇದೀಗ 50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರದ ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News