ಸಮಾನ ನಾಗರಿಕ ಸಂಹಿತೆಗೆ ತೀವ್ರ ವಿರೋಧ: ಎ.ಪಿ.ಉಸ್ತಾದ್

Update: 2016-11-12 16:24 GMT

ಮಂಗಳೂರು, ನ.12: ಕೇಂದ್ರ ಸರಕಾರವು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಲು ಮುಂದಾಗಿರುವ ಕ್ರಮಕ್ಕೆ ಮುಸ್ಲಿಂ ಸಮುದಾಯದ ತೀವ್ರ ವಿರೋಧವಿದೆ ಎಂದು ಅಖಿಲ ಭಾರತ ಸುನ್ನಿ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ.ಪಿ. ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಸುನ್ನಿ ಎಜುಕೇಶನಲ್ ಡೆವಲಪ್‌ಮೆಂಟ್ ಕಮಿಟಿ ಆಫ್ ಕರ್ನಾಟಕ (ಎಸ್‌ಇಡಿಸಿ)ಇದರ 15ನೆ ವಾರ್ಷಿಕದ ಸಮಾರೋಪದ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ಬೃಹತ್ ಸಮ್ಮೇಳನದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.

ಭಾರತದಲ್ಲಿ ಹಲವಾರು ಧರ್ಮ, ಭಾಷೆ, ಜಾತಿಯ ಜನರಿದ್ದಾರೆ. ಅವರ ಆಚಾರ-ವಿಚಾರ, ಸಂಸ್ಕಾರಗಳು ಬೇರೆ ಬೇರೆಯಾಗಿದೆ. ಅದನ್ನು ಎಂದೂ ಕೂಡ ಒಗ್ಗೂಡಿಸಲು ಸಾಧ್ಯವಿಲ್ಲ. ಹೀಗಿರುವಾಗ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಪ್ರಯತ್ನ ಅರ್ಥಹೀನ. ಇಸ್ಲಾಮ್ ಶರೀಅತ್ ವಿಚಾರದಲ್ಲಿ ಸರಕಾರ ಕೈ ಹಾಕುವುದು ಬೇಡ ಎಂದು ಎ.ಪಿ. ಉಸ್ತಾದ್ ನುಡಿದರು.

ಇಸ್ಲಾಮ್ ಯಾವತ್ತೂ ಕೂಡ ತಲಾಖ್‌ಗೆ ಪ್ರೋತ್ಸಾಹ ನೀಡುವುದಿಲ್ಲ. ದಾಂಪತ್ಯ ಜೀವನ ಮುಂದುವರಿಸಲು ಸಾಧ್ಯ ಇಲ್ಲ ಎಂದಾದಾಗ ಮಾತ್ರ ತಲಾಖ್ ನೀಡಬಹುದು. ಅದನ್ನೇ ನೆಪವಾಗಿಟ್ಟುಕೊಂಡು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ಪ್ರಯತ್ನಕ್ಕೆ ತಾವು ಅವಕಾಶ ನೀಡುವುದಿಲ್ಲ ಎಂದು ಎ.ಪಿ.ಉಸ್ತಾದ್ ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಮಸ್ತ ಉಪಾಧ್ಯಕ್ಷ ತಾಜುಶ್ಶರಿಅ: ಎಂ. ಅಲಿ. ಕುಂಞಿ ಮುಸ್ಲಿಯಾರ್ ಶಿರಿಯ ಆಶೀರ್ವಚನ ನೀಡಿದರು. ಕರ್ನಾಟಕ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಸಮ್ಮೇಳನ ಉದ್ಘಾಟಿಸಿದರು. ಸುನ್ನಿ ಕೋ-ಆರ್ಡಿನೇಶನ್ ಕಮಿಟಿಯ ಅಧ್ಯಕ್ಷ ಮಂಜನಾಡಿ ಪಿ.ಎಂ. ಅಬ್ಬಾಸ್ ಉಸ್ತಾದ್ ದುಆಗೈದರು.

ಖಾಝಿ ಅಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್, ಕೇರಳ ಮುಸ್ಲಿಮ್ ಜಮಾಅತ್ ಪ್ರಧಾನ ಕಾರ್ಯದರ್ಶಿ ಸೈಯದ್ ಇಬ್ರಾಹೀಂ ಖಲೀಲುಲ್ ಬುಖಾರಿ ಕಡಲುಂಡಿ, ಎಸ್‌ವೈಎಸ್ ಕೇರಳ ರಾಜ್ಯಾಧ್ಯಕ್ಷ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನಿ ಕಾಮಿಲ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಎನ್‌ಕೆಎಂ ಶಾಫಿ ಸಅದಿ ಮುಖ್ಯಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಹಾರ ಸಚಿವ ಯು.ಟಿ.ಖಾದರ್, ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹೀಂ,  ಶಾಸಕ ಜೆ.ಆರ್. ಲೋಬೊ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಮೇಯರ್ ಹರಿನಾಥ್, ಉದ್ಯಮಿಗಳಾದ ಕಣಚೂರು ಮೋನು ಹಾಜಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಮೋಹನ್ ಆಳ್ವ ಭಾಗವಹಿಸಿದ್ದರು.

ವಿಶೇಷ ಆಹ್ವಾನಿತರಾಗಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಅಲ್‌ಹಾಜ್ ಕೆ.ಎ. ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ, ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ, ಎಸ್‌ವೈಎಸ್ ರಾಜ್ಯಾಧ್ಯಕ್ಷ ಕೆ.ಪಿ. ಹುಸೈನ್ ಸಅದಿ ಕೆ.ಸಿ.ರೋಡ್, ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್, ಮುಸ್ಲಿಂ ಜಮಾಅತ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅಬೂಸುಫ್‌ಯಾನ್ ಮದನಿ, ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್‌ನ ಸದಸ್ಯ ಎನ್.ಎ. ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಕೆಸಿಎಫ್ ಅಂತಾರ್ಟ್ರೋಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖ್ ಬಾವ ಅಬುಧಾಬಿ, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ಉದ್ಯಮಿಗಳಾದ ಅಬ್ದುರ್ರವೂಫ್ ಪುತ್ತಿಗೆ, ಮನ್ಸೂರ್ ಅಹ್ಮದ್ ಆಝಾದ್, ಕಾರ್ಪೊರೇಟರ್ ಅಬ್ದುಲ್ ಅಝೀಝ್ ಕುದ್ರೋಳಿ ಮುಂತಾದವರು ಭಾಗವಹಿಸಿದ್ದರು.

ವೇದಿಕೆಯಲ್ಲಿ  ಕೃಷ್ಣಾಪುರ ಖಾಝಿ ಇ.ಕೆ. ಇಬ್ರಾಹೀಂ ಮುಸ್ಲಿಯಾರ್, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ. ಕಾಮಿಲ್ ಸಖಾಫಿ, ಮಾಜಿ ಸಚಿವ ಅಮರನಾಥ ಶೆಟ್ಟಿ, ಸೈಯದ್ ಹಾಮಿದ್ ತಂಙಳ್ ಚಿಕ್ಕಮಗಳೂರು, ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ, ಎಪಿಎಸ್ ತಂಙಳ್ ಉಪ್ಪಳ್ಳಿ, ಅಶ್ರಫ್ ಸಅದಿ ಮಲ್ಲೂರು, ಕಂಕನಾಡಿ ಇಸ್ಮಾಯೀಲ್ ಮದನಿ, ಇಸ್ಮಾಯೀಲ್ ಸಅದಿ ಕಿನ್ಯ, ಮುಹಮ್ಮದಲಿ ಸಖಾಫಿ ಅಶ್‌ಅರಿಯ್ಯಾ, ಎಸ್. ಅಬ್ದುರ್ರಹ್ಮಾನ್ ಇಂಜಿನಿಯರ್, ಎಂ.ಬಿ.ಎಂ.ಸಾದಿಕ್, ಕೆ.ಇ.ಸಾಲೆತ್ತೂರು, ಉರುಮಣೆ ಸಅದಿ, ಯಾಕೂಬ್ ಸಅದಿ ನಾವೂರು, ಹಸೈನಾರ್ ಆನೆಮಹಲ್, ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಎಂ. ಮುಮ್ತಾಝ್ ಅಲಿ ಸ್ವಾಗತಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ದೇಶದಲ್ಲಿ ಬಡತನ, ಶಿಕ್ಷಣ, ಆರೋಗ್ಯ ಇತ್ಯಾದಿ ಅನೇಕ ಸಮಸ್ಯೆಗಳಿವೆ. ಸರಕಾರ ಅವುಗಳ ಪರಿಹಾರಕ್ಕೆ ಮುಂದಾಗಬೇಕೇ ವಿನ: ಸಮಾನ ನಾಗರಿಕ ಸಂಹಿತೆಯಂತಹ ಸೂಕ್ಷ್ಮ ವಿಚಾರದ ಬಗ್ಗೆ ಕೈ ಹಾಕುವ ಅಗತ್ಯವಿಲ್ಲ. ಅದರ ಬಗ್ಗೆ ನಿರ್ಧಾರ ತಾಳಲು ಧಾರ್ಮಿಕ ಗುರುಗಳಿದ್ದಾರೆ ಎಂದು ಹೇಳಿದರು.

ಪಿಡಿಪಿ ನಾಯಕ ಅಬ್ದುನ್ನಾಸರ್ ಮಅದನಿ ಅನ್ಯಾಯವಾಗುತ್ತಿರುವ ಬಗ್ಗೆ ಸಮ್ಮೇಳನದಲ್ಲಾದ ಪ್ರಸ್ತಾಪಕ್ಕೆ ಉತ್ತರಿಸಿದ ಕುಮಾರಸ್ವಾಮಿ, ಈ ಬಗ್ಗೆ ವಿಧಾನ ಸೌಧದಲ್ಲಿ ಧ್ವನಿ ಎತ್ತುತ್ತೇನೆ ಎಂದು ಭರವಸೆ ನೀಡಿದರು.

►ಸಮಾನ ನಾಗರಿಕ ಸಂಹಿತೆ ಹಾಗೂ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳ ಕಗ್ಗೊಲೆ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

►ಕರಾವಳಿ ತೀರದಲ್ಲಿ ಗೋಹತ್ಯೆ ಮತ್ತಿತರ ವಿಚಾರದಲ್ಲಿ ರಾಜಕೀಯ ಪ್ರೇರಿತವಾಗಿ ನಡೆಯುವ ದುಷ್ಕೃತ್ಯವನ್ನು ಖಂಡಿಸಲಾಯಿತು.

►ಮದ್ರಸ ಶಿಕ್ಷಕರಿಗೆ ಪಿಂಚಣಿ ನೀಡಬೇಕು ಎಂದು ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರಲ್ಲಿ ಮನವಿ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News