×
Ad

ಉಳ್ಳಾಲ, ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

Update: 2016-11-12 23:53 IST

ಮಂಗಳೂರು, ನ.12: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಶನಿವಾರ ರಾತ್ರಿ 11ರಿಂದ ನ.15ರ ರಾತ್ರಿ 10ರವರೆಗೆ 144 ಸೆಕ್ಷನ್‌ನಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತರೊಬ್ಬರ ಹತ್ಯೆ ಯತ್ನ ನಡೆದಿದ್ದರೆ, ಇಂದು ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಬಳಿ ಇಬ್ಬರು ಅಮಾಯಕ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಈ ಹಿನ್ನೆಲೆಯಲ್ಲಿ ಕಮಿಷನರ್ ಅವರು ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News