×
Ad

ಕಿಟ್ಟಣ್ಣ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮ

Update: 2016-11-13 00:12 IST

ಮಂಗಳೂರು, ನ.12: ‘ಯಕ್ಷಗಾನ ಕಲೆಯಲ್ಲಿ ಸಮಗ್ರವಾಗಿರುವ ಪುರಾಣ ಪಾತ್ರ ಚಿತ್ರಣ ಶಾಲಾ ಪಠ್ಯದಲ್ಲಿ ಅಳವಡಿಸಬೇಕು. ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆ ಹೊಸ ಪೀಳಿಗೆಯನ್ನು ನಾಡ ಸಂಸ್ಕೃತಿಯಿಂದ ದೂರಕ್ಕೊಯ್ಯದಂತೆ ಯಕ್ಷಾಂಗಣದಂತಹ ಸಂಸ್ಥೆಗಳು ಕಾರ್ಯಪ್ರವೃತ್ತವಾಗಬೇಕು’ ಎಂದು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅಭಿಪ್ರಾಯಪಟ್ಟರು.

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ, ಕರ್ನಾಟಕ ಯಕ್ಷಭಾರತಿ(ರಿ) ಪುತ್ತೂರು ದ.ಕ., ಎಸ್‌ಡಿಎಂ ಎಜುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ಯಕ್ಷಾಂಗಣ ಮಂಗಳೂರು ವತಿಯಿಂದ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ, ‘ಯಕ್ಷಗಾನ ತಾಳಮದ್ದಳೆ ಸಪ್ತಾಹ 2016’ರ ಸರಣಿ ಸಂಸ್ಮರಣೆ ಅಂಗವಾಗಿ ನಡೆದ ಹವ್ಯಾಸಿ ಯಕ್ಷಗಾನ ಕಲಾವಿದ ನುಳಿಯಾಲು ಕಿಟ್ಟಣ್ಣ ಶೆಟ್ಟಿ ಸಂಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡಿದರು. ಪುಳಿಂಚ ಸೇವಾ ಪ್ರತಿಷ್ಠಾನದ ಸಂಚಾಲಕ, ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿ, ಕಾವೂರು ಬಂಟರ ಸಂಘದ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ, ಉದ್ಯಮಿ ಚಿತ್ತರಂಜನ್ ಶೆಟ್ಟಿ ನುಳಿಯಾಲು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಸಂತೋಷ್ ಕುಮಾರ್ ಶೆಟ್ಟಿ, ಸಂದೇಶ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ವಕ್ವಾಡಿ ಶೇಖರ ಶೆಟ್ಟಿ, ಎ. ಶಿವಾನಂದ ಕರ್ಕೆರ, ತೀರ್ಥಹಳ್ಳಿ ವಿಶ್ವನಾಥ ಶೆಟ್ಟಿ, ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಸುಧಾಕರ ರಾವ್ ಪೇಜಾವರ, ವಾಸುದೇವ ಆರ್. ಕೊಟ್ಟಾರಿ, ಸಿದ್ಧಾರ್ಥ ಅಜ್ರಿ, ನಿವೇದಿತಾ ಎನ್. ಶೆಟ್ಟಿ, ಶೋಭಾ ಕೇಶವ ಕಣ್ಣೂರು ಉಪಸ್ಥಿತರಿದ್ದರು.

ಯಕ್ಷಾಂಗಣದ ಕೋಶಾಧಿಕಾರಿ ತೋನ್ಸೆ ಪುಷ್ಕಳ ಕುಮಾರ್ ಸ್ವಾಗತಿಸಿದರು. ಸಹಕಾರ್ಯದರ್ಶಿ ಕೆ. ಲಕ್ಷ್ಮಿನಾರಾಯಣ ರೈ ಹರೇಕಳ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿನಕರ ಎಸ್. ಪಚ್ಚನಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News