ಇಂದು ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ
Update: 2016-11-13 00:13 IST
ಮಂಗಳೂರು, 12: ನಗರದ ಜೈನ ಮಿಲನ್ ಪ್ರಾಯೋಜಿಕತ್ವದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಮಂಗಳೂರು ವಲಯ ವಿಭಾಗದ ಜಿನ ಭಜನಾ ಸ್ಪರ್ಧೆಯು ನ.13ರಂದು ಎಸ್‌ಡಿಎಂ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದು, ಈ ಸಂದರ್ಭ ವಲಯದ ನಾಲ್ಕು ಜಿಲ್ಲೆಗಳನ್ನು ಒಳಗೊಂಡ ಸುಮಾರು 45 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ.
ವಲಯ ಮಟ್ಟದಲ್ಲಿ ಆಯ್ಕೆಯಾದ ಪ್ರಥಮ ನಾಲ್ಕು ತಂಡಗಳು ಬೆಂಗಳೂರಿನಲ್ಲಿ ಜರಗುವ ರಾಜ್ಯಮಟ್ಟದ ಅಂತರ್‌ವಲಯ ಸ್ಪರ್ಧೆಗೆ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ವಲಯ 8ರ ಉಪಾಧ್ಯಕ್ಷ ಪುಷ್ಪರಾಜ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.