ಹೈಕೋರ್ಟ್ ನ್ಯಾಯಮೂರ್ತಿ ನಿಧನ
Update: 2016-11-13 00:19 IST
ಗುವಾಹತಿ, ನ.12: ಗುವಾಹತಿ ಹೈಕೋರ್ಟ್ ನ್ಯಾಯಮೂರ್ತಿ ನಿಹಿತೇಂದು ಚೌಧರಿ ಡೆಂಗ್ ಕಾಯಿಲೆಯಿಂದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂದು ಮೃತಪಟ್ಟಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
ನ್ಯಾ. ಚೌಧರಿ 2013ರ ಮೇ 22ರಂದು ಗುವಾಹತಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ಸಕಲ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆದಿದೆ. ಗುವಾಹತಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಇತರ ನ್ಯಾಯಮೂರ್ತಿಗಳು, ವಕೀಲರು, ಜಿಲ್ಲೆಯ ಹಿರಿಯ ನಾಗರಿಕ ಹಾಗೂ ಪೊಲೀಸ್ ಅಧಿಕಾರಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ನ್ಯಾ. ಚೌಧರಿಯವರ ನಿಧನಕ್ಕೆ ಅಸ್ಸಾಂನ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲೆ ಸಂತಾಪ ವ್ಯಕ್ತಪಡಿಸಿದ್ದಾರೆ.