ಪೂರ್ವ ಸಿದ್ಧತೆ ಇಲ್ಲದೆ ಜನರಿಗೆ ತೊಂದರೆ: ಸಿದ್ದರಾಮಯ್ಯ
ಬೆಂಗಳೂರು, ನ. 14: ಐದು ನೂರು ರೂ. ಮತ್ತು ಒಂದು ಸಾವಿರ ರೂ.ನೋಟು ಅಮಾನ್ಯಗೊಳಿಸುವುದರಿಂದ ಬ್ಯಾಂಕುಗಳ ಮುಂದೆ ಮೈಲುದ್ದದ ಸರದಿ ಸಾಲು, ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಯಾಗುತ್ತಿದೆ. ಜನರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬ್ಯಾಂಕ್ ಅಧಿಕಾರಿಗಳು, ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜನರಿಗೆ ಯಾವುದೇ ತೊಂದರೆ ಆಗದಂತೆ ಹಾಗೂ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಆಗದಂತೆ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.
ಪೂರ್ವ ಸಿದ್ಧತೆ ಇಲ್ಲದೆ ತೊಂದರೆ: ಐದು ನೂರು ರೂ. ಮತ್ತು ಒಂದು ಸಾವಿರ ರೂಪಾಯಿ ನೋಟು ಅಮಾನ್ಯಕ್ಕೆ ಮುನ್ನ ಕೇಂದ್ರ ಸರಕಾರ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಪೂರ್ವಸಿದ್ಧತೆ ಇಲ್ಲದೆ ರದ್ದು ಮಾಡಿದ್ದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ತೊಂದರೆಯಲ್ಲಿ ಸಿಲುಕಿರುವ ಜನರಿಗೆ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಅಗತ್ಯ ಸಹಾಯ ಮಾಡಲು ಚರ್ಚಿಸಲಾಗಿದೆ ಎಂದ ಅವರು, ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸುವುದಿಲ್ಲ. ನಾನು ಈಗಾಗಲೇ ಸ್ವಾಗತಿಸಿದ್ದೇನೆ. ಆದರೆ, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕೆಂದು ಎಂದರು.