ಕಾರಿಗೆ ಲಾರಿ ಢಿಕ್ಕಿ: ಮೂವರಿಗೆ ಗಂಭೀರ ಗಾಯ
Update: 2016-11-15 18:03 IST
ಬಂಟ್ವಾಳ, ನ.15: ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪೆರ್ನೆ ಸಮೀಪದ ದೋರ್ಮೆ ಮೈರಕಟ್ಟೆ ಎಂಬಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯು ಮೈರಕಟ್ಟೆಯ ಬಳಿ ಉಪ್ಪಿನಂಗಡಿಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.