×
Ad

ಭಟ್ಕಳ: ಬೈಕ್ ನಿಂದ ಬಿದ್ದು ಮಹಿಳೆ ಸಾವು

Update: 2016-11-16 13:18 IST

ಭಟ್ಕಳ, ನ.16: ಪತಿ ಪತ್ನಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಬೈಕ್ ಹಿಂದೆ ಕುಳಿತ ಪತ್ನಿ ಆಯತಪ್ಪಿ ಕೆಳಗಡೆ ಬಿದ್ದು ಸಾವನ್ನಪ್ಪಿರುವ ಘಟನೆ ಭಟ್ಕಳ ಜಾಲಿ ರಸ್ತೆಯಲ್ಲಿ ನಡೆದಿದೆ. 

ಮೃತ ಮಹಿಳೆಯನ್ನು ವಿಜಯಾ ರಮೇಶ ಆಚಾರಿ(45) ಎಂದು ಗುರುತಿಸಲಾಗಿದೆ. ಇವರು ತಮ್ಮ ಪತಿಯ ಬೈಕ್ ನ ಹಿಂಬದಿಯಲ್ಲಿ ಕುಳಿತು ಜಾಲಿಯಿಂದ ಭಟ್ಕಳದ ಕಡೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.  

ಬೈಕ್ ನಿಂದ ಕೆಳಗಡೆ ಬಿದ್ದ ಇವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಕೂಡಲೆ ಸರಕಾರಿ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ರವಾನಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.  
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News