ಡಿಜಿಟಲ್ ಇಂಡಿಯಾ ಅಭಿಯಾನದ ವಾಹನಕ್ಕೆ ಚಾಲನೆ

Update: 2016-11-16 13:08 GMT

ಉಡುಪಿ, ನ.16: ಉಡುಪಿ ಜಿಲ್ಲೆಯಾದ್ಯಂತ 45ದಿನಗಳ ಕಾಲ ಸಂಚರಿಸಲಿರುವ ಕೇಂದ್ರ ಸರಕಾರ ಡಿಜಿಟಲ್ ಇಂಡಿಯಾ ಅಭಿಯಾನದ ವಾಹನಕ್ಕೆ ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

ಅಭಿಯಾನದ ಉಡುಪಿ ಜಿಲ್ಲಾ ಉಸ್ತುವಾರಿ ವ್ಯವಸ್ಥಾಪಕ ಪ್ರಮೋದ್ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಇಂತಹ ಮೂರು ವಾಹನಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಿ, ಗ್ರಾಪಂ, ಶಾಲಾ ಕಾಲೇಜುಗಳಲ್ಲಿ ತೆರಳಿ ಡಿಜಿಟಲ್ ತಂತ್ರಜ್ಞಾನದಲ್ಲಿ ಸಿಗುವ ಸರಕಾರಿ ಸೌಲಭ್ಯಗಳ ಕುರಿತು ಮಾಹಿತಿಗಳನ್ನು ನೀಡುತ್ತಿವೆ. ಚಿಕ್ಕಮಗಳೂರಿನಿಂದ ಆಗಮಿಸಿರುವ ಈ ವಾಹನ ಮುಂದೆ 45 ದಿನಗಳ ಕಾಲ ಉಡುಪಿಯ ಮೂರು ತಾಲೂಕುಗಳಲ್ಲಿ ಸಂಚರಿಸಿ ಮುಂದೆ ಶಿವಮೊಗ್ಗ ಜಿಲ್ಲೆಗೆ ತೆರಳಲಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News