ಶ್ರೀನಿವಾಸ್ ಭಟ್- ರಾಘವೇಂದ್ರಗೆ ವಾರೆಂಟ್ ಜಾರಿ

Update: 2016-11-16 16:07 GMT

ಉಡುಪಿ, ನ.16: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ನ್ಯಾಯಾಲಯಕ್ಕೆ ಗೈರು ಹಾಜರಾದ, ಜಾಮೀನಿನ ಮೇಲೆ ಬಿಡುಗಡೆಯಾಗಿ ರುವ ಸಾಕ್ಷನಾಶ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಮಂಗಳೂರಿನ ಸಬ್‌ಜೈಲಿನಲ್ಲಿದ್ದ ಮೂವರು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್ ಅವರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾ ಯಿತು. ಆದರೆ ಇವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದ್ದ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಹಾಗೂ ಕಾರು ಚಾಲಕ ರಾಘವೇಂದ್ರ ಗೈರು ಹಾಜರಾಗಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಜೇಶ್ ಕರ್ಣಂ ಇಬ್ಬರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದರು ಹಾಗೂ ಪ್ರಮುಖ ಮೂವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ನ.30ರವರೆಗೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಹಾಜರಿದ್ದರು.

ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಅವರಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅ.1ರಂದು ಶರ್ತಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರತಿ ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಅವರಿಗೆ ಆದೇಶ ನೀಡಲಾಗಿತ್ತು. ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಪ್ರಕರಣದ ಆರೋಪ ಪಟ್ಟಿ ಸಲ್ಲಿಸಿದ ಬಳಿಕ ಆರೋಪಿಗಳನ್ನು ಪ್ರಥಮ ಬಾರಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಂದರ್ಭದಲ್ಲಿ ಇವರಿಬ್ಬರು ಗೈರು ಹಾಜರಾಗಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ವಿಚಾರಣೆ ಮುಂದೂಡಿಕೆ

ಪ್ರಕರಣದ ಒಂದನೆ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯವು ನ.23ಕ್ಕೆ ಮುಂದೂಡಿ ಆದೇಶ ನೀಡಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಶಂಕರ ಅಮರಣ್ಣವರ್ ವರ್ಗಾ ವಣೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಆ ದಿನ ಆರೋಪಿ ಪರ ವಕೀಲರು ತಮ್ಮ ವಾದವನ್ನು ಮಂಡಿಸಲಿದ್ದಾರೆ. ಈ ವೇಳೆ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News