ಜನಸ್ನೇಹಿಯಾಗಿ ವ್ಯವಹರಿಸಲು ಬ್ಯಾಂಕ್‌ಗಳಿಗೆ ಡಿಸಿ ಕರೆ
ಮಡಿಕೇರಿ, ನ.16 : ಐನೂರು ಮತ್ತು ಒಂದು ಸಾವಿರ ರೂ. ಮುಖ ಬೆಲೆಯ ನೋಟುಗಳು ರದ್ದಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ವಿಶೇಷ ಗಮನ ಹರಿಸಲು ಜಿಲ್ಲೆಯ ವಿವಿಧ ಬ್ಯಾಂಕ್‌ಗಳ ಶಾಖೆಯ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಬ್ಯಾಂಕರ್ಸ್‌ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಳೆಯ 500 ಮತ್ತು 1,000 ರೂ. ಮುಖ ಬೆಲೆಯ ನೋಟ ರದ್ದುಗೊಳಿಸಿ 500 ಮತ್ತು 2,000 ರೂ. ಮುಖಬೆಲೆಯ ಹೊಸ ನೋಟುಗಳನ್ನು ಆರ್‌ಬಿಐ ಚಲಾವಣೆಗೆ ತಂದಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಹಣ ಜಮೆ ಮಾಡುವಾಗ ಮತ್ತು ಹಣ ಪಡೆಯುವಾಗ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುವುದು ಬ್ಯಾಂಕ್‌ಗಳ ಜವಾಬ್ದಾರಿ ಯಾಗಿದೆ. ಆ ನಿಟ್ಟಿನಲ್ಲಿ ಮತ್ತಷ್ಟು ವಿಶೇಷ ಗಮ ನಹರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯಲ್ಲಿ ನಾನಾ ಬ್ಯಾಂಕ್‌ಗಳ ಶಾಖೆಯ ಮುಖ್ಯಸ್ಥರು ಮತ್ತು ಸಿಬ್ಬಂದಿ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ತಿಳಿದು ಬಂದಿದೆ. ಅದೇ ರೀತಿ ಕಾರ್ಯಕ್ಷಮತೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು. ಜಿಲ್ಲೆಯಲ್ಲಿ 240 ಕೋಟಿ ರೂ. ಹಣ ಸಂಗ್ರಹ ನ.11ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 240 ಕೋಟಿ ರೂ. ಹಣ ಸಂಗ್ರಹವಾಗಿದೆ. ಬ್ಯಾಂಕ್ ಸಿಬ್ಬಂದಿ ರಜೆ ದಿನಗಳಲ್ಲಿಯೂ ಕಾರ್ಯ ನಿರ್ವಹಿಸಿ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎ. ದೇವಯ್ಯ ತಿಳಿಸಿದರು.
ಜಿಲ್ಲೆಯ ಎಲ್ಲಾ ಬ್ಯಾಂಕುಗಳಿಗೆ ಹೊಸ ನೋಟುಗಳು ಸರಬರಾಜಾಗಿವೆ. ಸಾರ್ವಜನಿಕರಿಗೆ ಲ್ಯವಾಗುವಷ್ಟು ಹಣ ಸಂಗ್ರಹ ವಿದೆ, ಆದ್ದರಿಂದ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಯಾಂಕ್ ಶಾಖೆಗಳ ಮುಖ್ಯಸ್ಥರು ಹಾಜರಿದ್ದರು.
ಡಿ.31ರ ವರೆಗೆ ಹಳೆಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶಗಳಿದ್ದು, ಯಾರೂ ಗಾಬರಿಗೆ ಒಳಗಾಗುವ ಅಗತ್ಯ ಇಲ್ಲ ಆದ್ದರಿಂದ ಸಾರ್ವಜನಿಕರು ಬ್ಯಾಂಕ್‌ನವರೊಂದಿಗೆ ಸ್ಪಂದಿಸಬೇಕು.
ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ, ಜಿಲ್ಲಾಧಿಕಾರಿ
500 ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ಜಮಾ ಮಾಡಲು ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಲಾಗಿದೆ. 500 ಮತ್ತು 1,000 ರೂ. ನೋಟುಗಳನ್ನು ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಬದಲಾಯಿಸಿಕೊಳ್ಳಲೂ ಅವಕಾಶ ಇದೆ. ಬದಲಾಯಿಸಿ ಕೊಳ್ಳುವಾಗ ಗುರುತಿನ ಚೀಟಿ, ಆಧಾ್, ಪಾನ್, ಮತದಾರರ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಅಮಾನ್ಯ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು ಎಂದು ನಬಾರ್ಡ್ ಜಿಲ್ಲಾ ವ್ಯವಸ್ಥಾಪಕ ಮುಂಡಂಡ ಸಿ.ನಾಣಯ್ಯ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 174 ಬ್ಯಾಂಕು ಶಾಖೆಗಳಿವೆ, ಹಾಗೂ 68 ಡಿ.ಸಿ.ಸಿ ಹಾಗೂ ಸಹಕಾರಿ ಬ್ಯಾಂಕುಗಳ ಶಾಖೆಗಳಿವೆ, ಜಿಲ್ಲೆಯಲ್ಲಿ ಆರ್.ಬಿ.ಐ ನಿಂದ ಎಸ್.ಬಿ.ಎಂ ನ 6, ಹಾಗೂ ಎಸ್.ಬಿ.ಐ ನ 2 ಹಾಗೂ ಕೆನರಾ ಬ್ಯಾಂಕ್‌ನ 1 ಸಂಗ್ರಹ ಕೇಂದ್ರಕ್ಕೆ ನೆಟುಗಳು ಪೂರೈಕೆಯಾಗುತ್ತದೆ. ಇಲ್ಲಿಂದ ಇತರ ಬ್ಯಾಂಕುಗಳಿಗೆ ಹಂಚಿಕೆಯಾಗುತ್ತದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎ.ದೇವಯ್ಯ ಮಾಹಿತಿ ನೀಡಿದರು.