ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ

Update: 2016-11-16 18:34 GMT

ಉಡುಪಿ, ನ.16: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2016- 17ನೆ ಸಾಲಿನಲ್ಲಿ ‘ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ’ಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಸರಕಾರಿ/ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಯೋಜನೆಯಡಿ ಪ್ರತಿ ತಿಂಗಳು 1,500 ರೂ.ನಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಸಂಬಂಧಪಟ್ಟು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್ ಮೂಲಕ ಜಮಾ ಮಾಡಲಾಗುವುದು. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದಲ್ಲಿ ವಾಸ್ತವ್ಯ ಹೂಡಿರಬೇಕು. ಅಲ್ಲದೇ ವಿದ್ಯಾರ್ಥಿಯ ಸ್ವಂತ ಸ್ಥಳ ನಗರ/ಪಟ್ಟಣವಾಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರೂ ಈ ಸೌಲ್ಯಕ್ಕೆ ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಜೊತೆಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಹಿಂದಿನ ಕೋರ್ಸ್‌ನ ಅಂಕಪಟ್ಟಿಯ ದೃಢೀಕೃತ ಪ್ರತಿ, ಎಸೆಸೆಲ್ಸಿ ಅಂಕಪಟ್ಟಿಯ ದೃಢೀಕೃತ ಪ್ರತಿ, ಬ್ಯಾಂಕ್ ಪಾಸ್‌ಪುಸ್ತಕದ ಪ್ರತಿ, ಸ್ವಂತ ಸ್ಥಳದಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿ ಲಗತ್ತಿಸಿರಬೇಕು.

www.gokdom.kar.nic.in

 ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ ನಿಂದ ಅಥವಾ ಸಂಬಂಧಿಸಿದ ಕಾಲೇಜುಗಳಿಂದ ಪಡೆದು ಭರ್ತಿ ಮಾಡಿ ಎಲ್ಲ ದಾಖಲೆಗಳೊಂದಿಗೆ ಕಾಲೇಜಿನ ಮೂಲಕ, ಜಿಲ್ಲಾ ಅಧಿಕಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 304 ಬಿ ಬ್ಲಾಕ್, 2ನೆ ಮಹಡಿ, ‘ರಜತಾದ್ರಿ’ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2574881 /2574596ರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News