ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Update: 2016-11-16 18:36 GMT

ಉಡುಪಿ, ನ.16: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಬಲೀಕರಣ ಇಲಾಖೆಯಿಂದ 2016-17ನೆ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ (ಇಲಾಖೆಯಿಂದ ಪಡೆದ ಅಧಿಕೃತ ಗುರುತು ಚೀಟಿ ಹಾಗೂ ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ) ಪ.ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಲದೆ ವಿಕಲಚೇತನರಿಗೆ ನೀಡುವ ಆಧಾರ ಗೂಡಂಗಡಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 11,500 ರೂ. ಮತ್ತು ನಗರ ಪ್ರದೇಶದಲ್ಲಿ 24,000 ರೂ. ವಾರ್ಷಿಕ ಆದಾಯವಿರುವ 18ರಿಂದ 55 ವರ್ಷದೊಳಗಿನ ಪ.ಜಾತಿ ಮತ್ತು ಪಂಗಡದ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಹಾಗೂ ವಿಕಲಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ನೀಡಲಾಗುವ ವಿವಾಹ ಪ್ರೋತ್ಸಾಹಧನ ಯೋಜನೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಆಸಕ್ತರು ನ.25ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಯವರ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಜಿಲ್ಲೆ ಇಲ್ಲಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0820-2574810/811ರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News