ಕಾರು ಢಿಕ್ಕಿ: ಬೈಕ್ ಸವಾರನಿಗೆ ಗಾಯ
Update: 2016-11-17 00:17 IST
ಉಪ್ಪಿನಂಗಡಿ, ನ.16: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಸಮೀಪದ ನೆಡ್ಚಿಲ್ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಆತೂರಿನ ಸುಂದರ ನಾಯ್ಕ ಎಂಬವರ ಪುತ್ರ ಧನಂಜಯ(25) ಗಾಯಗೊಂಡ ಬೈಕ್ ಸವಾರ. ಆತೂರು ಕಡೆಯಿಂದ ಉಪ್ಪಿನಂಗಡಿಗೆ ಧನಂಜಯ ಬೈಕ್‌ನಲ್ಲಿ ಬರುತ್ತಿದ್ದಾಗ ಎದುರಿನಿಂದ ಬಂದ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ರಸ್ತೆ ಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಹೊಂಡವನ್ನು ತಪ್ಪಿಸಲು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಕಾರನ್ನು ಚಲಾಯಿಸಿದ್ದೇ ಘಟನೆಗೆ ಕಾರಣವೆನ್ನಲಾಗಿದೆ.