ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಅಮಾನತು
Update: 2016-11-17 00:19 IST
ಕಾಪು, ನ.16: ಕಾಪು ಪಡು ಗ್ರಾಮದಲ್ಲಿರುವ ಕಾಪು ಮೀನುಗಾರರ ಸಹಕಾರ ಸಂಘದ ಕಾರ್ಯದರ್ಶಿ ಶೇಖರ್ ಸುವರ್ಣ ವಿರುದ್ಧ ಕೇಳಿಬಂದ ಆರೋಪದ ಹಿನ್ನೆಲೆಯಲ್ಲಿ ಸಂಘ ತುರ್ತು ಸಭೆ ನಡೆಸಿ ತನಿಖೆ ಮುಗಿಯುವವರೆಗೂ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ. ಕಾರ್ಯದರ್ಶಿಯವರಿಂದ ದೈನಂದಿನ ವ್ಯವಹಾರಕ್ಕೆ ತೊಂದರೆಯಾಗಿದ್ದು, ಸಂಸ್ಥೆಯ ದೈನಂದಿನ ವ್ಯವಹಾರ ಸುಗಮವಾಗಿ ನಡೆಸಲು ಸಂಘದ ದಾಖಲೆಗಳನ್ನು ಮತ್ತು ಅಧಿಕಾರವನ್ನು ದುರುಪಯೋಗ ಪಡಿಸಿದ್ದಕ್ಕಾಗಿ ತನಿಖೆ ಮುಗಿಯುವವರೆಗೆ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಂಘದ ಪ್ರಕಟನೆ ತಿಳಿಸಿದೆ.